ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ
12/07/2023
ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ರವರುಗಳನ್ನು ನೇಮಿಸಲಾಗಿದೆ.
ಪಕ್ಷದ ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw