ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ
ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮೇದಾಂತ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿದೆ.
82 ವರ್ಷದ ವರ್ಷ ವಯಸ್ಸಿನ ಮುಲಾಯಂ ಸಿಂಗ್ ಅವರು ಸೋಮವಾರದವರೆಗೆ ಕ್ರಿಟಿಕಲ್ ಕೇರ್ ಯುನಿಟ್ ನಲ್ಲಿದ್ದರು. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾದ ಹಿನ್ನೆಲೆಯಲ್ಲಿ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ,
ತಜ್ಞರ ತಂಡ ಮುಲಾಯಂ ಸಿಂಗ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದ್ದಾರೆ. ಇದೇ ವೇಳೆ ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ವಿವಿಧ ಪಕ್ಷಗಳ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇನ್ನೂ ಮುಲಾಯಂ ಸಿಂಗ್ ಅನಾರೋಗ್ಯದ ಮಾಹಿತಿ ತಿಳಿದು ಪ್ರಧಾನಿ ನರೇಂದ್ರ ಮೋದಿ ಅವರು ಅಖಿಲೇಶ್ ಯಾದವ್ ಅವರ ಜೊತೆಗೆ ಮಾತನಾಡಿದ್ದು, ಚಿಕಿತ್ಸೆಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಮುಲಾಯಂ ಸಿಂಗ್ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka