ನನ್ನ ಮುಂದಿನ ಗುರಿ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದು | ಮಮತಾ ಬ್ಯಾನರ್ಜಿ - Mahanayaka

ನನ್ನ ಮುಂದಿನ ಗುರಿ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದು | ಮಮತಾ ಬ್ಯಾನರ್ಜಿ

mamatha
10/06/2021

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಬಳಿಕ ತನ್ನ ಮುಂದಿನ ಗುರಿ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.


Provided by

 ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯಾನರ್ಜಿ, ರೈತರ ಪ್ರತಿಭಟನೆಗೆ ರೈತ ಮುಖಂಡ ಟಿಕಾಯತ್ ಅವರಿಗೆ ಬೆಂಬಲ ನೀಡಿದ್ದಾರೆ.

ರೈತರ ಚಳವಳಿ, ಪ್ರತಿಭಟನೆ ಕೇವಲ ಪಂಜಾಬ್, ಹರ್ಯಾಣ ಅಥವಾ ಉತ್ತರ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಇಡೀ ದೇಶಕ್ಕೆ ಸಂಬಂಧಿಸಿದ್ದಾಗಿದೆ. ಇಂದಿನಿಂದ ನನ್ನ ಗುರಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಮಮತಾ ಹೇಳಿದ್ದಾರೆ.


Provided by

 ಕೇಂದ್ರದ ನೀತಿಗಳ ಬಗ್ಗೆ ಸವಿಸ್ತಾರವಾಗಿ ರಾಜ್ಯಗಳು ಮಾತನಾಡಲು ಒಂದು ವೇದಿಕೆ ಕಲ್ಪಿಸಬೇಕು. ಆಗುತ್ತಿರುವ ಅನ್ಯಾಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಧ್ವನಿಯೆತ್ತಬೇಕು ಎಂದು ಟಿಕಾಯತ್ ಜೊತೆಗೆ ಸಭೆ ನಡೆಸಿದ ಬಳಿಕ ಹೇಳಿದ್ದಾರೆ.

ಇತ್ತೀಚಿನ ಸುದ್ದಿ