ಕರ್ತವ್ಯದ ವೇಳೆ ಹೃದಯಾಘಾತದಿಂದ ನಿಧನ: ಯೋಧ ಮುರಳೀಧರ್ ಬಿ.ಎಸ್. ಪಾರ್ಥಿವ ಶರೀರ ಮಂಗಳೂರಿಗೆ
ಮಂಗಳೂರು: ನಗರದ ಯೋಧ ಮುರಳೀಧರ್ ಬಿ.ಎಸ್. (37) ಎಂಬುವವರು ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ತರಲಾಗಿದೆ.
ಯೋಧ ಮುರಳೀಧರ್ ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ಮದನ್‌ಮೋಹನ್ ಮತ್ತಿತರರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದರು. ಪಾರ್ಥಿವ ಶರೀರವನ್ನು ಇದೀಗ ಎ.ಜೆ. ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಇಂದು ಬೆಳಗ್ಗೆ 8 ಗಂಟೆಗೆ ಎ.ಜೆ. ಆಸ್ಪತ್ರೆಯಿಂದ, ಸೈನಿಕ ಮುರಳಿಧರ ರೈ ಅವರ ಪಾರ್ಥಿವ ಶರೀರ ಅವರ ಮನೆ ಸಂಜಯ ನಗರ ಮುಗ್ರೋಡಿ ಸೆವೆನ್ ಸ್ಟಾರ್ ಕ್ಲಬ್ ನ ಹತ್ತಿರ, ಅಲ್ಲಿಂದ 10 ಗಂಟೆಗೆ ಸಾರ್ವಜನಿಕ ವೀಕ್ಷಣೆಗಾಗಿ ಆಂಜನೇಯ ಸಭಾಭವನದ ಮೈದಾನದಲ್ಲಿ ಹಾಗೂ ಅಲ್ಲಿಂದ ಮಹಾಕಾಳಿ ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಪದವು ಗ್ರಾಮದ ಶಕ್ತಿನಗರ ಮೊಗರೋಡಿ ನಿವಾಸಿಯಾಗಿದ್ದ ಮುರಳೀಧರ್ 2007ರಲ್ಲಿ ಸಶಸ್ತ್ರ ಸೀಮಾ ಪಡೆಗೆ (ಎಸ್ ಎಸ್ ಬಿ) ಸೇರಿದ್ದರು. ಆರು ತಿಂಗಳ ಹಿಂದೆ ಊರಿಗೆ ಬಂದಿದ್ದ ಇವರು ವರ್ಷದ ಹಿಂದೆ ಅಗಲಿದ್ದ ತನ್ನ ತಾಯಿಯ ಮೊದಲ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವ ಕೆಲವೇ ದಿನಗಳಲ್ಲಿ ಊರಿಗೆ ಮರಳುವವರಿದ್ದರು. ಅದಕ್ಕಾಗಿ 20 ದಿನಗಳ ರಜೆಯೂ ಮಂಜೂರಾಗಿತ್ತು. ಊರಿಗೆ ಮರಳಲು ತಯಾರಿ ನಡೆಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ಮೃತ ಯೋಧ ಪತ್ನಿ ಮತ್ತು ಮಗು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw