ದುರಂತ: ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ! - Mahanayaka

ದುರಂತ: ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ!

05/11/2024

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ‌ಬಂದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹದಿಹರೆಯದ ಮೂವರು ಮಕ್ಕಳನ್ನು ಗುಂಡಿಕ್ಕಿ ಕೊಂದಿದ್ದಾನೆ.


Provided by

ಪೊಲೀಸರ ಪ್ರಕಾರ, ವಾರಣಾಸಿಯ ಭೈದಾನಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ನಡೆದ ಘಟನೆಯಲ್ಲಿ ಆರೋಪಿ ರಾಜೇಂದ್ರ ಗುಪ್ತಾ (45) ತನ್ನ ಪತ್ನಿ ನೀತು ಗುಪ್ತಾ (43) ಪುತ್ರರಾದ ನವೇಂದ್ರ (25) ಮತ್ತು ಸುಬೇಂದ್ರ (15) ಮತ್ತು ಮಗಳು ಗೌರಂಗಿ (16) ಅವರನ್ನು ತಮ್ಮ ಮನೆಯಲ್ಲಿ ಮಲಗಿದ್ದಾಗ ಗುಂಡಿಕ್ಕಿ ಕೊಂದಿದ್ದಾನೆ.

ಘಟನೆಯ ನಂತರ ರಾಜೇಂದ್ರ ಗುಪ್ತಾ ತಮ್ಮ ಮನೆಯಿಂದ ಪರಾರಿಯಾಗಿದ್ದಾನೆ. ನಂತರ, ಆತ ನಗರದ ರೊಹಾನಿಯಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯು ಆತ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುಳಿವು ನೀಡಿದೆ.


Provided by

ಕುಟುಂಬದ ಬಾಡಿಗೆದಾರನು ಈ ಘಟನೆಯ ಕುರಿತು ಮಾಹಿತಿ ‌ನೀಡಿದ ನಂತರ ವಾರಣಾಸಿ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ.

ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ರಾಜೇಂದ್ರ ಗುಪ್ತಾ ಅವರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ಮಾತನಾಡಿದ ವಾರಣಾಸಿಯ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಗೌರವ್ ಬನ್ಸ್ವಾಲ್, “ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಗುಂಡಿಕ್ಕಿ ಕೊಂದ ಬಗ್ಗೆ ನಮಗೆ ಮಾಹಿತಿ ಬಂದಿದೆ. ಕೌಟುಂಬಿಕ ಕಲಹ, ಬ್ಲ್ಯಾಕ್ ಮ್ಯಾಜಿಕ್ ಸೇರಿದಂತೆ ಹಲವಾರು ಆಯಾಮ ಇದ್ದು ಆ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ “ಎಂದು ಹೇಳಿದರು.

“ರಾಜೇಂದ್ರ ಗುಪ್ತಾ ಅವರ ದೇಹವನ್ನು ವಾರಣಾಸಿಯಿಂದ ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಕೊಲೆ ಮಾಡಲಾಗಿದೆಯೇ ಅಥವಾ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ಕಂಡುಹಿಡಿಯಲು ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ” ಎಂದು ಬನ್ಸ್ವಾಲ್ ಹೇಳಿದ್ದಾರೆ.

1997 ರಿಂದ ಕೊಲೆ ಪ್ರಕರಣವನ್ನು ಎದುರಿಸುತ್ತುದ್ದ ರಾಜೇಂದ್ರ ಜಾಮೀನಿನ ಮೇಲೆ ಇತ್ತೀಚಿಗೆ ಹೊರಗೆ ಬಂದಿದ್ದ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ