ನಟೋರಿಯಸ್ ರೌಡಿ ಅಲ್ಯೂಮಿನಿಯಂ ಬಾಬು ಹತ್ಯೆ: ಅರೆ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ನಟೋರಿಯಸ್ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆಯಾಗಿದ್ದಾನೆ.
ಜಯನಗರ ಠಾಣೆ ರೌಡಿಶೀಟರ್ ಆಗಿದ್ದ ಅಲ್ಯೂಮಿನಿಯಂ ಬಾಬು ಅಲಿಯಾಸ್ ಸುರೇಶ್ ಬಾಬು ಇತ್ತೀಚಿಗೆ ತಮಿಳುನಾಡು ಕಡೆ ವಾಸ್ತವ್ಯ ಹೂಡಿದ್ದ. ಕೊಲೆ, ಸುಲಿಗೆ, ಬೆದರಿಕೆ, ದರೋಡೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ತಿಲಕ್ ನಗರ ಜಲ್ಲಿ ವೆಂಕಟೇಶ್ ಕೊಲೆ ಪ್ರಕರಣದ ಆರೋಪಿಯಾಗಿದ್ದ.
ಶನಿವಾರ ರಾತ್ರಿ ಈತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರ ಹತ್ಯೆಗೈಯಲಾಗಿದೆ. ಈತನ ಮೃತದೇಹ ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹತ್ಯೆ ನಡೆಸಿ ಶವ ಕಾಡಿನಲ್ಲಿ ಎಸೆದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw