ಬಂಧನವಾದ ಬೆನ್ನಲ್ಲೇ ಮುರುಘಾ ಶ್ರೀಗೆ ಎದೆ ನೋವು: ತನಿಖೆ ಎತ್ತ ಸಾಗ್ತಿದೆ?
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣ ಅವರನ್ನು ಎದೆನೋವಿನ ಹಿನ್ನೆಲೆಯಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಎದೆ ನೋವಿನ ಹಿನ್ನೆಲೆಯಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಶ್ರೀಗಳಿಗೆ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಇಸಿಜಿ ತಪಾಸಣೆ ಮಾಡಲಾಗುತ್ತಿದೆ ಎನ್ನಲಾಗಿದೆ.’
ಇನ್ನೂ ಸ್ವಾಮೀಜಿ ಬಂಧನದಿಂದಾಗಿ ಸಂತ್ರಸ್ತ ಬಾಲಕಿಯರಿಗೆ ನ್ಯಾಯಾಂಗದ ಮೇಲಿನ ನಂಬಿಕೆ ಹೆಚ್ಚಾಗಿದೆ. ಈ ನಡುವೆ ನಾನಾ ಹೈಡ್ರಾಮಗಳು ನಡೆಯುತ್ತಿರುವುದು ಆತಂಕಕ್ಕೂ ಕಾರಣವಾಗಿದೆ. ತನಿಖೆ ಎತ್ತ ಸಾಗ್ತಿದೆ? ಎಲ್ಲೋ ಒಂದು ಕಡೆ ಸ್ವಾಮೀಜಿಯ ರಕ್ಷಣೆಗೆ ಯತ್ನಗಳು ನಡೆಯುತಿದೆಯಾ? ಎನ್ನುವ ಅನುಮಾನಗಳು ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka