ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ನಿರ್ದೇಶಕ ಕೊರೊನಾಕ್ಕೆ ಬಲಿ!
23/04/2021
ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಕ್ಕೆ ಬಲಿಯಾಗಿದ್ದು, ಕೊರೊನಾ ಪಾಸಿಟಿವ್ ವರದಿಯ ಹಿನ್ನೆಲೆಯಲ್ಲಿ ಮುಂಬೈನ ಎಸ್ ಎಲ್ ರೆಹಜಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಕೊರೊನಾಕ್ಕೂ ಮೊದಲು ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಈ ನಡುವೆ ಅವರಿಗೆ ಕೊರೊನಾ ಸುತ್ತಿಕೊಂಡಿತ್ತು. ಪರಿಣಾಮವಾಗಿ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಹೃದಯ ಸಂಬಂಧಿ ಕಾಯಿಲೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಶ್ರವಣ್ ಅವರಿಗೆ ಕೊರೊನಾ ಬಂದಿದ್ದರಿಂದಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗಿದೆ. ಇನ್ನೂ ಶ್ರವಣ್ ಅವರ ಸಂಪರ್ಕದಲ್ಲಿದ್ದ ಅವರ ಪುತ್ರ ಸಂಜೀವ್ ರಾಥೋಡ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.