ಎಲ್ಲ ದೇವಸ್ಥಾನಗಳಲ್ಲಿಯೂ ಮುಸ್ಲಿಮರ ವ್ಯಾಪಾರ ಬಹಿಷ್ಕರಿಸಬೇಕು: ಪ್ರಮೋದ್ ಮುತಾಲಿಕ್
ಚಾಮರಾಜನಗರ: ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿಯೂ ಮುಸ್ಲಿಮರ ವ್ಯಾಪಾರವನ್ನು ಬಹಿಷ್ಕರಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಚಾಮರಾಜನಗರದಲ್ಲಿ ಸಂಘಟನೆಯೊಂದರ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೂ ದೇವಾಲಯಗಳ ನೂರು ಮೀಟರ್ ಅಂತರದಲ್ಲಿ ಹಿಂದೂಯೇತರರಿಗೆ ಪ್ರವೇಶವಿಲ್ಲ, ವ್ಯಾಪಾರ ಮಾಡಬಾರದು ಎಂಬ ನಿಯಮ ಇದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿರುವ ಘಟನೆಯನ್ನು ಸ್ವಾಗತಿಸಿದ ಅವರು, ಇದಕ್ಕೆ ತನ್ನ ಸಂಪೂರ್ಣ ಬೆಂಬಲವಿದೆ ಎಂದು ಘೋಷಿಸಿದರು.
ನಮ್ಮದೇ ಅನ್ನ ಉಂಡು ನಮ್ಮ ದೇವಸ್ಥಾನದಲ್ಲೇ ಬಾಂಬ್ ಇಟ್ಟು ಉಡಾಯಿಸುವ ದುಷ್ಟರ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ ಎಂದ ಅವರು, ಯಾರೋ ನಾಲ್ಕು ಜನ ಮಾಡಿದ ಕೃತ್ಯಕ್ಕೆ ಇಡೀ ಮುಸ್ಲಿಮ್ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಮುಸ್ಲಿಮ್ ಮುಖಂಡರು, ಮುಲ್ಲಾ, ಮೌಲ್ವಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka