ಇಸ್ಲಾಮಿಕ್ ಧಾರ್ಮಿಕ ಮುಖಂಡನನ್ನು ಗುಂಡಿಕ್ಕಿಕೊಂದ ದುಷ್ಕರ್ಮಿಗಳು
ಮುಂಬೈ: ಅಫ್ಘಾನಿಸ್ತಾನದ ಇಸ್ಲಾಮಿಕ್ ನಾಯಕನನ್ನು ನಾಲ್ವರ ಅಪರಿಚಿತ ತಂಡ ಮುಂಬೈನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದ್ದು, 35 ವರ್ಷದ ಖ್ವಾಜಾ ಸೈಯದ್ ಚಿಶ್ತಿ ಹತ್ಯೆಯಾದವರು ಎಂದು ತಿಳಿದು ಬಂದಿದೆ.
ಹತ್ಯೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಮುಂಬೈನಿಂದ 200 ಕಿ.ಮೀ. ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖ್ವಾಜಾ ಸೈಯದ್ ಚಿಶ್ತಿ ಅವರು ಯೋಲಾದಲ್ಲಿ ‘ಸೂಫಿ ಬಾಬಾ’ ಎಂದು ಜನಪ್ರಿಯರಾಗಿದ್ದರು. ದುಷ್ಕರ್ಮಿಗಳು ಬಂದೂಕಿನಿಂದ ಅವರ ಹಣೆಗೆ ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಪ್ರಜೆ ಸೂಫಿ ಬಾಬಾನನ್ನು ಕೊಂದ ನಂತರ, ದುಷ್ಕರ್ಮಿಗಳು ಅವರು ಬಳಸುತ್ತಿದ್ದ ಎಸ್ ಯುವಿ ಮೂಲಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ಯೋಲಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka