ಮುಸ್ಲಿಂ ವೇಷ ಧರಿಸಿ ಅನುಮಾಸ್ಪದ ರೀತಿ ಓಡಾಟ: ಆರು ಮಂದಿ ಹಿಂದೂ ಧರ್ಮೀಯರು ಪೊಲೀಸ್ ವಶಕ್ಕೆ
ಬೆಳಗಾವಿ: ಮುಸ್ಲಿಂ ವೇಷ ಧರಿಸಿ ಅನುಮಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಆಂದ್ರಪ್ರದೇಶ ಮೂಲದ ಆರು ಮಂದಿಯನ್ನು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬೆಳಗಾವಿಯ ವೀರಭದ್ರ ನಗರದಲ್ಲಿ ಆಂಧ್ರ ಮೂಲದ ಆರು ಮಂದಿ ಭಿಕ್ಷೆ ಬೇಡುವ ನೆಪದಲ್ಲಿ ಮನೆ-ಮನೆಗೆ ಭೇಟಿ ನೀಡುತ್ತಿದ್ದರು. ಪದೇ ಪದೇ ಒಂದೇ ಪ್ರದೇಶದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅವರನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ನಾವು ಆಂಧ್ರ ಮೂಲದ ಹಿಂದೂಗಳು. ಹೊಟ್ಟೆಪಾಡಿಗಾಗಿ ನಾವು ಮುಸ್ಲಿಂ ವೇಷವನ್ನು ಧರಿಸಿ ಭಿಕ್ಷೆ ಬೇಡುತ್ತಾ ಜೀವನ ನಡೆಸುತ್ತಿದ್ದೇವೆ ಎಂದಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮದುವೆ ಸಂಭ್ರಮದ ವೇಳೆ ಒಂದು ಕ್ಷಣದಲ್ಲೇ ನಡೆದಿತ್ತು ದುರಂತ: 13 ಮಂದಿಯ ದಾರುಣ ಸಾವು
13 ಅಪ್ರಾಪ್ತ ವಿದ್ಯಾರ್ಥಿನಿಯರ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ
ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ ಮತ್ತು ಪತ್ನಿ: ಪತ್ನಿಯ ದಾರುಣ ಸಾವು
ಪ್ರೇಮ ನಿವೇದನೆ ತಿರಸ್ಕರಿಸಿದ್ದಕ್ಕೆ ಹಾಡ ಹಗಲೇ ಯುವತಿಯ ಕತ್ತು ಸೀಳಿದ ಪಾಗಲ್ ಪ್ರೇಮಿ!