ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ಪ್ರಕರಣ: ಓರ್ವ ಕಿಡಿಗೇಡಿಯ ಬಂಧನ
ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆಯ ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾಲಿಂಗ ಐಗಳಿ ಬಂಧಿತ ಆರೋಪಿಯಾಗಿದ್ದು, ನಬಿಸಾಬ್ ಅವರು ನೀಡಿರುವ ದೂರಿನನ್ವಯ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಧಾರವಾಡ ನುಗ್ಗಿಕೇರಿಯ ದೇವಸ್ಥಾನದ ಆವರಣದಲ್ಲಿ ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬಿಸಾಬ್ ಅವರಿಗೆ ಸೇರಿದ ಅಂಗಡಿ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು, ಕ್ವಿಂಟಾಲ್ ಗಟ್ಟಲೆ ಕಲ್ಲಂಗಡಿ ಹಣ್ಣನ್ನು ಒಡೆದು ಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದ್ದು, ಘಟನೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ.
ಮುಸ್ಲಿಮರ ವಿರುದ್ಧ ಯಾರು ಏನೇ ದೌರ್ಜನ್ಯ ನಡೆಸಿದರೂ, ಸರ್ಕಾರ ಕಾಪಾಡುತ್ತದೆ ಎನ್ನುವ ಭಾವನೆ ಸಮಾಜದಲ್ಲಿ ಸೃಷ್ಟಿಯಾಗಿದೆ. ಹೀಗಾಗಿ ಪುಂಡರು ಕಾನೂನಿನ ಯಾವುದೇ ಭಯವಿಲ್ಲದೇ ಮುಸ್ಲಿಮ್ ವ್ಯಾಪಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಂಧನ ಬೆಲೆ ಏರಿಕೆ: ವಿಮಾನದಲ್ಲಿ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ನಡುವೆ ಜಟಾಪಟಿ
ತಂದೆ ತಾಯಿಯನ್ನು ನಡು ರಸ್ತೆಯಲ್ಲಿ ಅಟ್ಟಾಡಿಸಿ ಕೊಂದ ಪಾಪಿ ಪುತ್ರ!
ಶ್ರೀಲಂಕಾ ಆರ್ಥಿಕ ದುಸ್ಥಿತಿ: ಭಾರತಕ್ಕೆ ಮತ್ತೆ ವಲಸೆ ಬಂದ 19 ಜನರು