ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಠಿಣ ಶಿಕ್ಷೆ ಕೊಡಿಸುತ್ತೇವೆ: ಸಚಿವ ಮುರುಗೇಶ್ ನಿರಾಣಿ

ಕಲಬುರಗಿ: ಮುಸ್ಲಿಮ್ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರು ಯಾರಿದ್ದಾರೋ ಅವರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ. ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗಿರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಯೇ ತೀರುತ್ತೇವೆ ಎಂದರು.
ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ, ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಡಲಾಗಿತ್ತು. ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಅವರು ಹೇಳಿದರು.
ಪ್ರಗತಿಪರರ ಮೌನ:
ದಲಿತ ಮುಸ್ಲಿಮ್ ಭಾಯಿ ಭಾಯಿ ಎನ್ನುವ ಸಂದೇಶ ಸಾರುತ್ತಿದ್ದ ಮುಸ್ಲಿಮ್ ಸಂಘಟನೆಗಳು ಹಾಗೂ ಪ್ರಗತಿ ಪರ ಸಂಘಟನೆಗಳು. ಕಲಬುರ್ಗಿಯಲ್ಲಿ ನಡೆದ ದಲಿತ ಯುವಕನ ಹತ್ಯೆಯ ಬಗ್ಗೆ ಮೌನವಹಿಸಿದ್ದು ಅಚ್ಚರಿಗೆ ಕಾರಣವಾಗಿದೆ.
ಮುಸ್ಲಿಮ್ ಧರ್ಮದೊಳಗೂ ಬ್ರಾಹ್ಮಣ್ಯಕ್ಕೆ ಸಮಾನಾದ ಭೇದಭಾವ ಮನೋಭಾವ ಇದೆ ಎನ್ನುವುದಕ್ಕೆ ಈ ಘಟನೆ ಕಾರಣವಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದ್ದ, ಪ್ರಗತಿಪರರು, ಕಾಂಗ್ರೆಸ್ ಗೆ ಲಾಭವಾಗುವುದಿದ್ದರೆ ಮಾತ್ರವೇ ನಾವು, ದಲಿತರ ಪರ ಧ್ವನಿಯೆತ್ತುತ್ತೇವೆ ಎನ್ನುವುದನ್ನು ಸಾಬೀತು ಪಡಿಸಿದರೆ ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು