ಮುಸ್ಲಿಮರನ್ನು ಈ ದೇಶದಲ್ಲಿ ದ್ವಿತೀಯ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳಲಾಗುತ್ತಿದೆ: ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಹೇಳಿಕೆ
ಮುಸ್ಲಿಮರನ್ನು ಈ ದೇಶದಲ್ಲಿ ದ್ವಿತೀಯ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಮುಸ್ಲಿಮರ ಆರಾಧನಾ ಕೇಂದ್ರಗಳೂ ಸೇರಿದಂತೆ ಮುಸ್ಲಿಮರ ಆಸ್ತಿಪಾಸ್ತಿಗಳನ್ನು ಕಬಳಿಸಲಾಗುತ್ತಿದೆ ಎಂದವರು ಹೇಳಿದ್ದಾರೆ.
ಮುಸ್ಲಿಮರ ವಿರುದ್ಧ ದೌರ್ಜನ್ಯಗಳ ಪ್ರಕರಣದಲ್ಲಿ ಹೆಚ್ಚಳವಾಗಿದೆ. ಅವರ ಆಸ್ತಿ ಪಾಸ್ತಿಗಳನ್ನು ಲೂಟಿ ಮಾಡಲಾಗುತ್ತಿದೆ. ಅವರನ್ನು ಹತ್ಯೆ ಮಾಡಲಾಗುತ್ತಿದೆ ಮತ್ತು ಅವರ ಮನೆಗಳನ್ನು ದ್ವಂಸ ಮಾಡಲಾಗುತ್ತಿದೆ. ಹಾಗೆಯೇ ಅವರ ಆರಾಧನಾ ಕೇಂದ್ರಗಳನ್ನು ಪ್ರಭುತ್ವದ ಬೆಂಬಲದೊಂದಿಗೆ ವಶಪಡಿಸಿಕೊಳ್ಳಲಾಗುತ್ತಿದೆ ಎಂದವರು ಹೇಳಿದ್ದಾರೆ.
ಮುಸ್ಲಿಮರು ಹೆಚ್ಚಿರುವ ಉತ್ತರ ಪ್ರದೇಶದ ಮೀರಾಪುರದಲ್ಲಿ ಮುಸ್ಲಿಂ ಮಹಿಳೆಯನ್ನು ಮತದಾನ ಮಾಡದಂತೆ ಪೊಲೀಸನೋರ್ವ ಗನ್ ಹಿಡಿದು ತಡೆದ ವಿಡಿಯೋವನ್ನು ಎಲ್ಲರೂ ನೋಡಿದ್ದೀರಿ, ಮುಸ್ಲಿಮರ ಮೇಲೆ ದೌರ್ಜನ್ಯಗಳು ಮಿತಿಮೀರುತ್ತಿದೆ ಎಂದವರು ಹೇಳಿದ್ದಾರೆ.
ಹಾಗೆಯೇ ಸಂಭಾಲ್ ನಲ್ಲಿ ನಡೆದ ಹಿಂಸಾಚಾರ ಮತ್ತು ಪೊಲೀಸ್ ಗೋಲಿಬಾರ್ ನ ಬಗ್ಗೆ ಪ್ರಿಯಾಂಕ ಗಾಂಧಿ ಸರ್ಕಾರದ ಗಮನ ಸೆಳೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj