ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ
ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನಿರ್ಬಂಧ ಹೇರಿದ್ದಾರೆ.
ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿಆರ್ ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ. ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ.27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾ. 1ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕರೆ ನೀಡಿದಲ್ಲದೆ, ಫೆ.27ಕ್ಕೆ ಆಳಂದ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ.
ಈ ಹಿನ್ನೆಲೆ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಕಾರಣ ಪ್ರಮೋದ್ ಮುತಾಲಿಕ್ ತಂದೆ ಹನುಮಂತರಾವ್ ಮುತಾಲಿಕ್, ಕು.ಚೈತ್ರಾ, ತಂ.ಬಾಲಕೃಷ್ಣ ನಾಯಕ್ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಂದು ಮುಂಜಾನೆ ಉಕ್ರೇನ್‌ನಿಂದ ತವರಿಗೆ ಬಂದಿಳಿದ 250 ಭಾರತೀಯರು
ಯಡಿಯೂರಪ್ಪ ಅವರಿಗೆ 80ನೇ ಹುಟ್ಟು ಹಬ್ಬದ ಸಂಭ್ರಮ: ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ
ಕರ್ನಾಟಕದ 11 ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸ್: ನಿಟ್ಟುಸಿರು ಬಿಟ್ಟ ಪೋಷಕರು
ಕಾವೇರಿ ನದಿ ದಾಟುವ ವೇಳೆ ದುರಂತ: ಹಲವು ಭಕ್ತರು ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ