ಮೂವರು ಪತ್ನಿಯರ ಗಂಡ ಭೀಕರ ಹತ್ಯೆ: ವಾಕಿಂಗ್ ಗೆ ಹೋಗಿದ್ದೇ ತಪ್ಪಾಯ್ತೆ?

raju mallappa
16/03/2022

ಬೆಳಗಾವಿ: ವಾಕಿಂಗ್​ ಹೋದ ವ್ಯಕ್ತಿಯ ಮೇಲೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ  ಇರಿದು, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ.

ರಾಜು ಮಲ್ಲಪ್ಪ ದೊಡ್ಡಬಣ್ಣವರ್ 45 ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ರಾಜು ಮೂವರನ್ನು ಮದುವೆಯಾಗಿದ್ದು, ಯಾರಿಗೂ ವಿಚ್ಛೇದನ ನೀಡಿಲ್ಲ. ಮದುವೆಯಾದ ವಿಚಾರ ಎಲ್ಲರಿಗೂ ತಿಳಿದಿತ್ತು. ರಾಜು ಮಂಗಳವಾರ ಭವಾನಿ ನಗರದ‌ ಮನೆಯಿಂದ ಎಂದಿನಂತೆ ಬೆಳಗ್ಗೆ ಆರು ಗಂಟೆಗೆ ವಾಕಿಂಗ್‌ ಗೆ ತೆರಳಿದ್ದಾರೆ. ಈ ವೇಳೆ, ಎರಡನೇ ಹೆಂಡತಿಗೆ ಫೋನ್ ಕರೆ ಮಾಡಿದ್ದಾರೆ. ಆದರೆ, ಫೋನ್​​ ತಗೆದಿಲ್ಲ ಅನ್ನೋ ಕಾರಣಕ್ಕೆ ಒಬ್ಬರೇ ವಾಕ್ ಮಾಡಲು ಹೊರಟ್ಟಿದ್ದಾರೆ ಎನ್ನಲಾಗಿದೆ.

ಮನೆಯಿಂದ ಒಂದು ಕಿ.ಮೀ. ಹೋಗುವಷ್ಟರಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ರಾಜು ಕಣ್ಣಿಗೆ ಕಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಾಕಿಂಗ್ ಮಾಡುತ್ತಿದ್ದ ಕೆಲವರು ರಸ್ತೆಯಲ್ಲಿ ಶವ ಬಿದ್ದಿದ್ದನ್ನು ಗಮನಿಸಿ ಬೆಳಗಾವಿ ಗ್ರಾಮೀಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮದುವೆಗೆ ಒಪ್ಪದ ಹೆತ್ತವರನ್ನೇ ಹತ್ಯೆಗೈದ ಅಪ್ರಾಪ್ತ ಮಗಳು

ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ರಾಜೀನಾಮೆ

ಚೀನಾದ ಬೆನ್ನಲ್ಲೇ ದಕ್ಷಿಣ ಕೊರಿಯಾದಲ್ಲಿ  ಕೊರೊನಾ  ಭೀತಿ

ಬರೋಬ್ಬರಿ 4 ಸಾವಿರಕ್ಕೂ ಹೆಚ್ಚು ಥಿಯೇಟರ್​​ ನಲ್ಲಿ ನಾಳೆ ಜೇಮ್ಸ್​ ರಿಲೀಸ್​​

ಪ್ರಜಾಪ್ರಭುತ್ವಕ್ಕೆ ಫೇಸ್‍ಬುಕ್ ಮಾರಕ: ರಾಹುಲ್ ಗಾಂಧಿ ಆರೋಪ

 

 

ಇತ್ತೀಚಿನ ಸುದ್ದಿ

Exit mobile version