ಬೆಳಗಾವಿ: ಮೂವರು ಕಂದಮ್ಮಗಳ ಸಾವು ಪ್ರಕರಣ; ತನಿಖೆಗೆ ಆದೇಶಿಸಿದ ಡಿಎಚ್ ಒ
ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಮೂವರು ಕಂದಮ್ಮಗಳು ಮೃತಪಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಾವಿನ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಡಿಎಚ್ ಒ ಡಾ. ಎಸ್.ವಿ.ಮುನ್ಯಾಳ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ. 12 ರಂದು 21 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. ಅದರಲ್ಲಿ ನಾಲ್ವರು ಮಕ್ಕಳಿಗೆ ದಡಾರ, ರುಬೆಲ್ಲಾ ವ್ಯಾಕ್ಸಿನ್ ನೀಡಲಾಗಿತ್ತು. ಆ ನಾಲ್ಕು ಮಕ್ಕಳಲ್ಲಿ ಪ್ರತಿಕೂಲ ಪರಿಣಾಮ ಕಾಣಿಸಿಕೊಂಡಿದೆ. ಬಳಿಕ ಅವರಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎಂದು ಮಾಹಿತಿ ನೀಡಿದರು.
ವಯಸ್ಕರಿಗೆ ಕೋವಿಡ್ ಹಾಗೂ ಮಕ್ಕಳಿಗೆ ಎಂಆರ್ ಲಸಿಕೆ ಒಂದೇ ಕೇಂದ್ರದಲ್ಲಿ ನೀಡಿದ ಆರೋಪವನ್ನು ಡಿಎಚ್‌ಒ ಡಾ.ಎಸ್. ವಿ.ಮುನ್ಯಾಳ ಅವರು ಅಲ್ಲಗಳೆದಿದ್ದಾರೆ. ಯಾವುದೇ ಲಸಿಕೆ ಪ್ರತಿಕೂಲ ಪರಿಣಾಮ ಬೀರಿದರೆ, ಆ ಬಗ್ಗೆ ಪರಿಶೀಲನೆಗೆ ಸಮಿತಿ ಇದೆ. ಆ ಸಮಿತಿಯ ವರದಿಯಂತೆ ಪ್ರಾಥಮಿಕವಾಗಿ ಲಸಿಕೆಯಿಂದ ಅಡ್ಡ ಪರಿಣಾಮ ಬೀರಿದ ಬಗ್ಗೆ ಮಾಹಿತಿ ಇದೆ ಎಂದರು.
ಈಗಾಗಲೇ ಮೃತ ಮಕ್ಕಳ ರಕ್ತದ ಮಾದರಿ, ಮಲ-ಮೂತ್ರದ ಮಾದರಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದೇವೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮವಹಿಸುತ್ತೇವೆ. ಈಗಾಗಲೇ ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದೇವೆ. ಇದರಲ್ಲಿ ಯಾರೇ ಸಿಬ್ಬಂದಿ ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇನ್ನುಳಿದ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಮಾರಕ ರೋಗಗಳ ತಡೆಗೆ ನೀಡುವ ಎಲ್ಲ ಲಸಿಕೆಗಳನ್ನು ಮಕ್ಕಳಿಗೆ ಹಾಕಿಸಬೇಕು ಎಂದು ಡಿಹೆಚ್‌ಒ ಡಾ. ಎಸ್.ವಿ.ಮುನ್ಯಾಳ ಮನವಿ ಮಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಾಲಬಾಧೆ: ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ
ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದ ಮೂವರು ಕಂದಮ್ಮಗಳು ಸಾವು
ಬಾತ್ ರೂಮ್ ನಲ್ಲೇ ತಾಯಿ, ಮಗು ದಾರುಣ ಸಾವು | ಸ್ನಾನದ ಕೋಣೆಯಲ್ಲಿ ದುರಂತ ಸಾವು