ಪೈಪ್ ಇಳಿಸುತ್ತಿದ್ದ ವೇಳೆ ಪೈಪ್ ಮೈಮೇಲೆ ಬಿದ್ದು ಲಾರಿ ಚಾಲಕ ಸಾವು!
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕುಡಿಯುವ ನೀರಿನ ಕಾಮಗಾರಿಗಾಗಿ ತಂದ ಪೈಪ್ ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕವಾಗಿ ಮೈಮೇಲೆ ಬಿದ್ದು ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ಧರ್ಮಸ್ಥಳ ಗ್ರಾಮಕ್ಕೆ ಸರಕಾರದಿಂದ ಕುಡಿಯುವ ನೀರಿನ ಕಾಮಗಾರಿ ಸರಕಾರದಿಂದ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ ಕಾಮಗಾರಿಗಾಗಿ ತೆಲಂಗಾಣದಿಂದ ಧರ್ಮಸ್ಥಳಕ್ಕೆ ಲಾರಿಯಲ್ಲಿ ಪೈಪ್ ತರಲಾಗಿತ್ತು.
ಲಾರಿಯಿಂದ ಚಾಲಕ ಪೈಪ್ ಇಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಪೈಪ್ ಲಾರಿ ಚಾಲಕ ಮಧುಸೂದನ್ ರೆಡ್ಡಿ (40)ಅವರ ಮೇಲೆ ಬಿದ್ದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw