ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಘಟನೆಯನ್ನು ವಿವರಿಸಿದ ಸಂತ್ರಸ್ತ ವಿದ್ಯಾರ್ಥಿನಿಯ ಸ್ನೇಹಿತ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಮೈಸೂರನ್ನು ಬೆಚ್ಚಿಬೀಳಿಸಿದೆ. ಘಟನೆಯ ವೇಳೆ ಸಂತ್ರಸ್ತ ವಿದ್ಯಾರ್ಥಿನಿಯ ಜೊತೆಗಿದ್ದ ಯುವತಿಯ ಸ್ನೇಹಿತ ಘಟನೆಯನ್ನು ವಿವರಿಸಿದ್ದು, ನನ್ನ ತಲೆಗೆ ಕಲ್ಲಿನಿಂದ ಹೊಡೆದು, ತನ್ನ ಸ್ನೇಹಿತೆಯನ್ನು ಎಳೆದೊಯ್ದಿರುವುದಾಗಿ ಆತ ತಿಳಿಸಿದ್ದಾನೆ.
ನಾವು ಇಲ್ಲಿಗೆ ರೌಂಡ್ಸ್ ಗೆ ಬಂದಿದ್ದೆವು. ಈ ವೇಳೆ ಈ ಪ್ರದೇಶದಲ್ಲಿ 5ರಿಂದ 6 ಜನರು ಮದ್ಯಪಾನ ಮಾಡುತ್ತಿದ್ದರು. ನಮ್ಮನ್ನು ನೋಡಿದ ತಕ್ಷಣ ಗಲಾಟೆ ಆರಂಭಿಸಿದ್ದಾರೆ. ಬಳಿಕ ನನ್ನ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ನನಗೆ ಪ್ರಜ್ಞೆ ತಪ್ಪಿದ ಬಳಿಕ ನನ್ನ ಸ್ನೇಹಿತೆಯನ್ನು ದೂರ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿಸಿದ್ದಾನೆ.
ಅತ್ಯಾಚಾರಿಗಳ ತಂಡದಲ್ಲಿದ್ದವರೆಲ್ಲರೂ ಕನ್ನಡದಲ್ಲಿ ಮಾತನಾಡುತ್ತಿದ್ದರು. ಒಬ್ಬಾತ ಮಾತ್ರ ಬೇರೆ ಭಾಷೆಯಲ್ಲಿ ಮಾತನಾಡುತ್ತಿದ್ದ ಎಂದು ಯುವಕ ತಿಳಿಸಿದ್ದಾನೆ. ಸದ್ಯ ಯುವಕ ಮತ್ತು ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತ ಯುವತಿ ಉತ್ತರ ಭಾರತ ಮೂಲದ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ವರದಿಯಾಗಿದೆ.
ಇನ್ನೂ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಘಟನಾ ಸ್ಥಳಕ್ಕೆ ತೆರಳಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸದಲ್ಲಿ ಪೊಲೀಸರಿದ್ದಾರೆ. ಸದ್ಯ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ನೀಡಲಾಗುವ ಸಹಾಯಧನ ಯೋಜನೆ ಹಿಂಪಡೆಯಬೇಕು | ಯತ್ನಾಳ್ ಒತ್ತಾಯ
ಈಗ ಮನಮೋಹನ್ ಸಿಂಗ್ ಪ್ರಧಾನಿಯಾಗಿರುತ್ತಿದ್ದರೆ, ಭಾರತೀಯರು ರಕ್ಷಣೆಗಾಗಿ ಪರದಾಡಬೇಕಿತ್ತು | ನಳಿನ್ ಕುಮಾರ್ ಕಟೀಲ್
ಅಫ್ಘಾನಿಸ್ತಾನದ ಸಚಿವ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್!
ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ!
56ನೇ ವಯಸ್ಸಿನಲ್ಲಿ ಮತ್ತೆ ವಿವಾಹವಾದ ಬಹುಭಾಷಾ ನಟ ಪ್ರಕಾಶ್ ರೈ
ಎನ್. ಮಹೇಶ್ ಹಿಂದೂ ಧರ್ಮಕ್ಕೆ ಬೈದು ಶಾಸಕರಾದವರು! | ಎನ್.ಮಹೇಶ್ ವಿರುದ್ಧ ಅಪಸ್ವರ ಎತ್ತಿದ ಬಿಜೆಪಿ ಶಾಸಕ