ಅಕ್ಟೋಬರ್ 5ರಂದು ಮೈಸೂರಿನಲ್ಲಿ ‘ಮಹಿಷ ದಸರಾ’ | ಅನುಮತಿ ನೀಡದ ಜಿಲ್ಲಾಡಳಿತ! - Mahanayaka
3:23 AM Wednesday 11 - December 2024

ಅಕ್ಟೋಬರ್ 5ರಂದು ಮೈಸೂರಿನಲ್ಲಿ ‘ಮಹಿಷ ದಸರಾ’ | ಅನುಮತಿ ನೀಡದ ಜಿಲ್ಲಾಡಳಿತ!

mahisha dasara
04/10/2021

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಮಹಿಷ ದಸರಾ- 2021 ಅಕ್ಟೋಬರ್ 5ರಂದು ಮೈಸೂರಿನಲ್ಲಿ ನಡೆಯಲಿದ್ದು, ನಗರದ ವಿಶ್ವಮೈತ್ರಿ ಬುದ್ಧವಿಹಾರದಿಂದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದವರೆಗೆ ಮಹಿಷ ಮೂರ್ತಿಯ ಮೆರವಣಿಗೆ ಬೆಳಗ್ಗೆ 9 ಗಂಟೆಗೆ ನಡೆಯಲಿದೆ.

ಮಹಿಷನ ಮೂರ್ತಿಗೆ ಪುಷ್ಪಾರ್ಚನೆ ನಡೆಸಿದ ಬಳಿಕ, ವಿಚಾರಸಂಕಿರಣಗಳು ನಡೆಯಲಿವೆ. ಈ ವಿಚಾರ ಸಂಕಿರಣದಲ್ಲಿ  ಪ್ರಗತಿಪರರು, ವಿಚಾರವಾದಿಗಳು, ವಿವಿಧ ಮಠಾಧೀಶರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಮಹಿಷ ದಸರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ, ನಗರ ಪೊಲೀಸರು ಯಾವುದೇ ಅನುಮತಿ ನೀಡಿಲ್ಲ ಎಂದು ಮಾಜಿ ಮೇಯರ್ ಪುರುಷೋತ್ತಮ್ ಸೋಮವಾರ ಹೇಳಿದ್ದಾರೆ ಎಂದು ವರದಿಯಾಗಿದೆ.

ಇನ್ನೂ  ಮಹಿಷ ದಸರಕ್ಕೆ ಅನುಮತಿ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರೊ.ಮಹೇಶ್ ಚಂದ್ರಗುರು, ನಮ್ಮ ವೋಟುಗಳು ಬೇಕು. ಆದರೆ ನಮ್ಮ ಸಂಸ್ಕೃತಿಗಳು ಬೇಡವೇ? ನಾಡಹಬ್ಬ ದಸರಾಕ್ಕೆ ನಮ್ಮ ವಿರೋಧವಿಲ್ಲ. ನಾವು ಕೂಡ ಭಾಗಿಯಾಗುತ್ತೇವೆ. ಆದರೆ, ಬಹುತ್ವದ ಪ್ರತೀಕವಾಗಿರುವ ಮಹಿಷ ದಸರಾಕ್ಕೆ ಜಿಲ್ಲಾಡಳಿತ ಅನುಮತಿ ನೀಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಬಿಜೆಪಿ ತನ್ನ ತಾಲಿಬಾನಿ‌ ಮನಸ್ಥಿತಿಯನ್ನು  ಬೆತ್ತಲು‌ ಮಾಡಿಕೊಂಡಿದೆ | ಯೋಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

ಜ್ಯೂಸ್ ಎಂದು ಭಾವಿಸಿ ತಾತನ ಬ್ರಾಂಡಿ ಕುಡಿದ 5 ವರ್ಷದ ಬಾಲಕ, ತಾತ ಇಬ್ಬರೂ ಸಾವು

ಮನೆಗೆ ನುಗ್ಗಿ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಪ್ರವಾದಿಯ ಅವಹೇಳನಾಕಾರಿ ವ್ಯಂಗ್ಯ ಚಿತ್ರ ಬಿಡಿಸಿದ್ದ ವಿವಾದಿತ ಕಲಾವಿದ ಅಪಘಾತದಲ್ಲಿ ಸಾವು!

ಬಿಜೆಪಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ | ಅಖಿಲೇಶ್ ಯಾದವ್

ಪ್ರವಾದಿಯ ಅವಹೇಳನಾಕಾರಿ ವ್ಯಂಗ್ಯ ಚಿತ್ರ ಬಿಡಿಸಿದ್ದ ವಿವಾದಿತ ಕಲಾವಿದ ಅಪಘಾತದಲ್ಲಿ ಸಾವು!

ರೈತರ ಹತ್ಯಾಕಾಂಡ: ಬೇಡಿಕೆ ಈಡೇರದ ಹೊರತು ಮೃತ ರೈತರ ಅಂತ್ಯಸಂಸ್ಕಾರ ಮಾಡಲ್ಲ |  ರಾಕೇಶ್ ಟಿಕಾಯತ್ ಪಟ್ಟು

ಇತ್ತೀಚಿನ ಸುದ್ದಿ