ಮೈಸೂರು ಗ್ಯಾಂಗ್ ರೇಪ್  ಆರೋಪಿಗಳ ಸುಳಿವು ಲಭ್ಯ | ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೃತ್ಯ? - Mahanayaka
10:18 AM Wednesday 11 - December 2024

ಮೈಸೂರು ಗ್ಯಾಂಗ್ ರೇಪ್  ಆರೋಪಿಗಳ ಸುಳಿವು ಲಭ್ಯ | ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೃತ್ಯ?

mysore
27/08/2021

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದೆ ಎಂದು ಹೇಳಲಾಗಿದ್ದು,  ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ತಮಿಳುನಾಡು ಮೂಲದ ಒಬ್ಬ ಇಂಜಿನಿಯರಿಂಗ್ ಸ್ಟೂಡೆಂಟ್ ಹಾಗೂ ಕೇರಳ ಮೂಲದ ಮೂವರು ವಿದ್ಯಾರ್ಥಿಗಳ ಮೇಲೆ ಅನುಮಾನ ಮೂಡಿದ್ದು,  ಆಗಸ್ಟ್ 24ರಂದು ರಾತ್ರಿ 7 ಗಂಟೆ ಸುಮಾರಿಗೆ ಈ ಅತ್ಯಾಚಾರ ನಡೆದಿದ್ದು, ಬೆಳಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್ ಅಧಿಕಾರಿಗಳಿಗೆ ಲಭ್ಯವಾಗಿರುವ ಈ ಸುಳಿವನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಮೈಸೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ನಾಲ್ವರು ಆರೋಪಿಗಳು ಕೂಡ ಪರೀಕ್ಷೆಗೂ ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ. ಸದ್ಯ ಆರೋಪಿಗಳ ಬಂಧನಕ್ಕಾಗಿ ಪ್ರತ್ಯೇಕ ತಂಡ ರಚಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಹೊರಟಿದ್ದಾರೆ ಎಂದು  ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಇನ್ನಷ್ಟು ಸುದ್ದಿಗಳು…

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು

ಕಾಬುಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ | ಸಾಕಷ್ಟು ಜನರು ಅಪಾಯಕ್ಕೆ ಸಿಲುಕಿರುವ ಶಂಕೆ

ಕಾನೂನು ಸುವ್ಯವಸ್ಥೆ ಹತೋಟಿಗೆ ಬರಲಿ ಎಂದು ಚಾಮುಂಡಿಯನ್ನು ಬೇಡಿದ್ದೇನೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ!

ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಆರೋಪಿ ಪಿಎಸ್ ಐ ಅರ್ಜುನ್ ಜಾಮೀನು ಅರ್ಜಿ ವಜಾ

ಶುಂಠಿ ಬಳಕೆಯಿಂದ ಆರೋಗ್ಯಕ್ಕೆ ಏನೇನು ಲಾಭವಿದೆ ಗೊತ್ತಾ?

ಇತ್ತೀಚಿನ ಸುದ್ದಿ