ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಸಿಗಲಿದೆಯೇ? | ಎನ್.ಮಹೇಶ್ ಏನಂದ್ರು? - Mahanayaka

ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಸಿಗಲಿದೆಯೇ? | ಎನ್.ಮಹೇಶ್ ಏನಂದ್ರು?

11/01/2021

ಬೆಂಗಳೂರು:  ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಎರಡನೇ ಬಾರಿಗೆ ಸಚಿವರಾಗುತ್ತಾರೆ, ಸಂಪುಟದಲ್ಲಿ ಅವರೂ ಸ್ಥಾನ ಪಡೆದಿದ್ದಾರೆ ಎಂಬ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಈ  ಬಗ್ಗೆ ಎನ್.ಮಹೇಶ್ ಅವರು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ನನಗೆ ಸಿಎಂ ಯಡಿಯೂರಪ್ಪ ಸೇರಿದಂತೆ, ಯಾರೂ ಕೂಡ ಕರೆ ಮಾಡಿಲ್ಲ, ನಾನು ಸಚಿವ ಸಂಪುಟ ಸೇರ್ಪಡೆಯಾಗುತ್ತೇನೆ ಎನ್ನುವುದು ಕೇವಲ ಊಹಾಪೋಹಾ ಅಷ್ಟೆ ಎಂದು ಅವರು ಹೇಳಿದ್ದಾರೆ.


ADS

ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಯಾವುದೇ ಮಾಹಿತಿಯೂ ನನಗೆ ಇಲ್ಲ ಎಂದು ಕೊಳ್ಳೇಗಾಲದ ಪಕ್ಷೇತರ ಶಾಸಕರಾಗಿರುವ ಎನ್.ಮಹೇಶ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಎನ್.ಮಹೇಶ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಗಳಿದ್ದವು. ಇತ್ತೀಚೆಗೆ ಎನ್.ಮಹೇಶ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಹಲವು ಚರ್ಚೆಗಳು ಕೂಡ ಆರಂಭವಾಗಿತ್ತು. ಈ ನಡುವೆ ಇದೀಗ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿಯೂ ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಗಳ ನಡುವೆಯೇ ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಎನ್.ಮಹೇಶ್ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ