ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್: ಬೆಂಗಳೂರಿನ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೆ ಎನ್.ಮಹೇಶ್ ಸಿದ್ಧತೆ
ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 5ರಂದು ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಶಾಸಕ ನಂಜುಂಡಸ್ವಾಮಿ ನಿವಾಸದಲ್ಲಿ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ ಸಂಬಂಧ ಚರ್ಚೆಯನ್ನು ನಡೆಸಲಾಗಿದ್ದು, ಎನ್.ಮಹೇಶ್ ಬಿಜೆಪಿಗೆ ಸೇರ್ಡೆಯಾಗುತ್ತಿರುವುದಕ್ಕೆ ನಂಜುಂಡಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನೂ ಮಾಜಿ ಹಾಗೂ ಹಾಲಿ ಶಾಸಕರು ಸೇರಿ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸುವ ವಿಶ್ವಾಸವನ್ನು ಹೊಂದಿರುವುದಾಗಿ ಅವರು ತಿಳಿಸಿದ್ದಾರೆ. ಇನ್ನೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ವಿಚಾರವನ್ನು ಸ್ವತಃ ಎನ್.ಮಹೇಶ್ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ಎನ್.ಮಹೇಶ್ ಹೊಸ ಪಕ್ಷ ಕಟ್ಟುತ್ತಾರೆಯೇ ಅಥವಾ ಬಿಜೆಪಿಗೆ ಸೇರ್ಪಡೆಯಾಗುತ್ತಾರೆಯೇ ಎನ್ನುವ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ.
ಇನ್ನಷ್ಟು ಸುದ್ದಿಗಳು…
ಸದಾನಂದ ಗೌಡ, ರೇಣುಕಾಚಾರ್ಯ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ | ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಅನುಮಾನಾಸ್ಪದ ಸಾವು!
ಗಡ್ಡಧಾರಿಗಳಿಗೆ ಸಿಹಿ ಸುದ್ದಿ: ಮುಂದಿನ ಅವಧಿಯಲ್ಲಿ ನೀವೂ ಸಿಎಂ ಆಗುವ ಸಾಧ್ಯತೆ ಇದೆ!
“ಕಸವು ಕಸದ ಬುಟ್ಟಿಗೆ ಸೇರಿತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ!
ಆಸ್ತಿ ವಿವಾದ ಬಗೆಹರಿಸಲು ಬಂದ ಕೌನ್ಸಿಲರ್, ಎಸ್ ಐಯನ್ನು ಅಟ್ಟಾಡಿಸಿ ಹೊಡೆದ ಮಹಿಳೆ | ವಿಡಿಯೋ ವೈರಲ್