ಜಾತಿ ಪೀಡೆಗಳನ್ನು ಮಟ್ಟ ಹಾಕಲು ನಡೆಯಲಿದೆ ಗುಪ್ತ ಸಮೀಕ್ಷೆ: ಅಸ್ಪೃಶ್ಯತೆ ಆಚರಿಸಿದರೆ ಜೈಲೂಟ ಗ್ಯಾರೆಂಟಿ - Mahanayaka

ಜಾತಿ ಪೀಡೆಗಳನ್ನು ಮಟ್ಟ ಹಾಕಲು ನಡೆಯಲಿದೆ ಗುಪ್ತ ಸಮೀಕ್ಷೆ: ಅಸ್ಪೃಶ್ಯತೆ ಆಚರಿಸಿದರೆ ಜೈಲೂಟ ಗ್ಯಾರೆಂಟಿ

koppala ashprushyate acharane
22/09/2021

ಕುಷ್ಟಗಿ: ಅಸ್ಪೃಶ್ಯತಾ ಆಚರಣೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಇಂಥ ಪ್ರಕರಣಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಗುಪ್ತ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್ ಹೇಳಿದ್ದಾರೆ.

ಅಸ್ಪೃಶ್ಯತೆ ಆಚರಣೆ ನಡೆದ ಘಟನೆಗೆ ಸಂಬಂಧಿಸಿದಂತೆ ಬುಧವಾರ ತಾಲೂಕಿನ ಮಿಯಾಪುರ ಗ್ರಾಮಕ್ಕೆ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಅವರು ನಂತರ ನಡೆದ ಸಾರ್ವಜನಿಕ ಜಾಗೃತಿ ಸಭೆಯ ವೇಳೆ ಈ ಮಾಹಿತಿ ನೀಡಿದರು. ಯಾರಿಗೂ ಗೊತ್ತಾಗದ ರೀತಿಯಲ್ಲಿ ಸ್ವಯಂ ಸೇವಾ ತಂಡದ ಮೂಲಕ ಅಸ್ಪೃಶ್ಯತೆ ಆಚರಣೆ ಕುರಿತು ಪತ್ತೆ ಹಚ್ಚಲಾಗುತ್ತದೆ. ಅಂಥ ಪ್ರಕರಣಗಳು ಎಲ್ಲಿಯಾದರೂ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.

ಅಸ್ಪೃಶ್ಯತೆ ಆಚರಣೆ ಸಾಮಾಜಿಕ ಪಿಡುಗು ಆಗಿದ್ದು ಇದನ್ನು ಹೋಗಲಾಡಿಸುವುದಕ್ಕೆ ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಯಾರೂ ದೂರು ನೀಡದಿದ್ದರೂ ಸರ್ಕಾರದ ವತಿಯಿಂದಲೇ ಎಫ್‌ ಐಆರ್‌ ದಾಖಲಿಸಲಾಗುತ್ತದೆ. ಮಿಯಾಪುರ ಘಟನೆಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಪಂಚಾಯ್ತಿ ನಡೆಸಿದವರನ್ನು ಬಂಧಿಸಲಾಗಿದೆ ಎಂದು ಹೇಳಿದರು. ಅಲ್ಲದೆ ಇಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯವಾಗಿರುತ್ತದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ತರಗತಿ ಕೋಣೆಯಲ್ಲಿಯೇ ಮಹಿಳೆಯೊಂದಿಗೆ ಅಸಹ್ಯವಾಗಿ ನಡೆದುಕೊಂಡ ಮುಖ್ಯ ಶಿಕ್ಷಕ | ವಿಡಿಯೋ ವೈರಲ್

ಮಲ್ಪೆ ಬೀಚ್ ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಮೂವರು ಪ್ರವಾಸಿಗರು

ಪಾರ್ಟಿ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ!

ರೇಣುಕಾಚಾರ್ಯ, ಕಾರಜೋಳ ಚಿರತೆ ಹಿಡಿಯುವುದರಲ್ಲಿ ಎಕ್ಸಪರ್ಟ್ ಗಳು | ಸದನದಲ್ಲಿ ಸ್ವಾರಸ್ಯಕರ ಚರ್ಚೆ

ಬೆಂಗಳೂರು: ಅಪಾರ್ಟ್​ಮೆಂಟ್ ಅಗ್ನಿ ಅವಘಡ ಪ್ರಕರಣಕ್ಕೆ ಹೊಸ ತಿರುವು: ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿಲ್ಲ!

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದ ತಾಯಿ, ಮಗ ದಾರುಣ ಸಾವು

 

ಇತ್ತೀಚಿನ ಸುದ್ದಿ