ಬೆಳ್ತಂಗಡಿ: ನದಿಗೆ ಬಿದ್ದು ವ್ಯಕ್ತಿಯ ದಾರುಣ ಸಾವು
ಬೆಳ್ತಂಗಡಿ: ಮದ್ಯವ್ಯಸನಿಯಾಗಿದ್ದ ವ್ಯಕ್ತಿಯೋರ್ವ ನದಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕೊಕ್ರಾಡಿಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿ ಕೊಕ್ರಾಡಿ ಬನತರಡ್ಕ ನಿವಾಸಿ ಚೆಲುವಯ್ಯ. (48) ಎಂಬವರಾಗಿದ್ದಾರೆ. ಜ.24ರಂದು ರಾತ್ರಿಯ ವೇಳೆ ಮನೆಯಲ್ಲಿ ಮಲಗಿದ್ದವರು ಬೆಳಿಗ್ಗೆ ನಾಪತ್ತೆಯಾಗಿದ್ದರು.
ಜ 25ರಂದು ಮನೆಯವರು ಹುಡುಕಾಟ ನಡೆಸಿದಾಗ ಮನೆಯ ಸಮೀಪವಿರುವ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಅವರ ಮಗ ಸುಜಿತ್ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw