ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದ ತಾಯಿ, ಮಗ ದಾರುಣ ಸಾವು
ಮನಾಲಿ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ತಾಯಿ ಮತ್ತು ಮಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದ್ದು, ಘಟನೆ ನಡೆದ ವೇಳೆ ಇವರನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಅದಾಗಲೇ ಅವರು ನೀರಿನಲ್ಲಿ ಮುಳುಗಿದ್ದಾರೆ.
ದೆಹಲಿ ಮೂಲದ ಪ್ರೀತಿ ಭಾಸಿನ್ ಮತ್ತು ಅವರ 12 ವರ್ಷ ವಯಸ್ಸಿನ ಪುತ್ರ ಪುಲ್ಕಿತ್ ಭಾಸಿನ್ ಮೃತಪಟ್ಟವರಾಗಿದ್ದಾರೆ. ನಿನ್ನೆ ಹೊಟೇಲ್ ಲೆಗ್ರಾಂಡ್ ನಲ್ಲಿ ತಂಗಿದ್ದ ಇವರು ಸೆಲ್ಫಿ ತೆಗೆದುಕೊಳ್ಳಲು ಮನಾಲಿ ನಗರದ ಬಿಯಾಸ್ ನದಿಯ ಬಳಿಗೆ ಬಂದಿದ್ದರು. ಬಂಡೆ ಏರಿ ಇಬ್ಬರು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಂಡೆಯಿಂದ ಜಾರಿ ನದಿಗೆ ಬಿದ್ದು ನೀರುಪಾಲಾಗಿದ್ದರು.
ನೀರಿನಲ್ಲಿ ಮುಳುಗುತ್ತಿದ್ದ ಇವರನ್ನು ಕಂಡು ಹೊಟೇಲ್ ಉದ್ಯೋಗಿ ರವಿ ಎಂಬುವರು ರಕ್ಷಿಸಲು ಮುಂದಾದರಾದರೂ ಪ್ರಯೋಜನವಾಗಿಲ್ಲ. ಈ ಘಟನೆಯಲ್ಲಿ ಅವರೂ ಕೂಡ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ತಾಯಿ ಮಗನ ಶವಗಳನ್ನು ಹೊರ ತೆಗೆದಿದ್ದಾರೆ. ತಾಯಿ-ಮಗನ ಶವಗಳು ನೀರಿನ ನಾಲ್ಕು ಕಿಲೋಮೀಟರ್ ಆಳದಲ್ಲಿ ಪತ್ತೆ ಮಾಡಲಾಗಿದೆ. ಮೃತದೇಹಗಳನ್ನು ಮನಾಲಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ಓವೈಸಿ ಮನೆ ಧ್ವಂಸ ಪ್ರಕರಣ: ಐವರು ಹಿಂದೂ ಸೇನೆ ಕಾರ್ಯಕರ್ತರು ಅರೆಸ್ಟ್
ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ?
ಕೊಪ್ಪಳದಲ್ಲಿ ಅಸ್ಪೃಶ್ಯತಾ ಆಚರಣೆ ಪ್ರಕರಣ: ಐವರು ಕಿಡಿಗೇಡಿಗಳ ಅರೆಸ್ಟ್
ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ ಶುಲ್ಕ ಮನ್ನಾ | ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ
ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಅಗ್ನಿ ಅವಘಡ: ತಾಯಿ, ಮಗಳು ಸಜೀವ ದಹನ
ಕಡಲತೀರದಲ್ಲಿ ಆಕ್ರಮಣಕಾರಿ ‘ಟೈಗರ್ ಶಾರ್ಕ್’ನ ಕಳೇಬರ ಪತ್ತೆ
ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು
ಕೊಪ್ಪಳ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್