ಸ್ನಾನ ಮಾಡಲು ನದಿಗೆ ತೆರಳಿದ್ದ ಯುವಕನ ದುರಂತ ಸಾವು!
15/09/2022
ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮುನಿಯಾಲು ನಿವಾಸಿ ಪವನ್(25) ಎಂದು ಗುರುತಿಸಲಾಗಿದೆ ಇವರು ಇಂದು ಸಂಜೆ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಪವನ್ ಕೊಚ್ಚಿಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುಮಾರು 200 ಮೀ. ದೂರದಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka