ಈಜಲು ತೆರಳಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವು!
ಹಾವೇರಿ: ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.
ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತಪಟ್ಟವರಾಗಿದ್ದು, ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇನ್ನೂ ಕೂಡ ಮೃತದೇಹಗಳು ಪತ್ತೆಯಾಗಿಲ್ಲ. ಶೋಧ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw