ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ - Mahanayaka
3:14 AM Wednesday 11 - December 2024

ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ

rain
19/11/2021

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆಯಾಗುತ್ತಿದ್ದಂತೆಯೇ ಧಾರಾಕಾರ ಮಳೆ ಸುರಿದಿದ್ದು,  ಪರಿಣಾಮವಾಗಿ ರಸ್ತೆಯಲ್ಲಿ ನೀರು ನದಿ ಹರಿದಂತೆ ಹರಿಯುತ್ತಿರುವುದು ಕಂಡು ಬಂತು. ಇನ್ನೊಂದೆಡೆಯಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿ ಬಡ ಜನರು ಸಂಕಷ್ಟಕ್ಕೀಡಾದರು.

ಮಳೆಯ ಪರಿಣಾಮ ಎಂ.ಜಿ.ರೋಡ್,  ಕೆ.ಜಿ.ರಸ್ತೆ, ಸಿಟಿ ಮಾರ್ಕೆಟ್, ಕಾರ್ಪೋರೇಷನ್, ಕೆ.ಆರ್.ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್, ಮಲ್ಲೇಶ್ವರ, ಯಶವಂತಪುರ, ಹೆಬ್ಬಾಳ, ಪೀಣ್ಯ ಸೇರಿದಂತೆ ಹಲವೆಡೆಗಳಲ್ಲಿ ಪ್ರಮುಖ ರಸ್ತೆಗಳು ಟ್ರಾಫಿಕ್ ಜಾಮ್ ನಿಂದ ಕೂಡಿತ್ತು.

ಮಳೆಯಿಂದಾಗಿ ಅಂಗಡಿಗಳು ಗ್ರಾಹಕರಿಲ್ಲದೇ ಸಂಕಷ್ಟಕ್ಕೀಡಾಗಿದ್ದವು. ಬೀದಿ ವ್ಯಾಪಾರಿಗಳಂತೂ ವ್ಯಾಪಾರವಿಲ್ಲದೇ ಬರಿಗೈಯಲ್ಲಿ ಹಿಂದಿರುಗುವಂತಾಗಿತ್ತು. ಕೊರೊನಾ, ಲಾಕ್ ಡೌನ್ ಎಂಬ ನಿಯಮಗಳ ಬಳಿಕ ಈಗಷ್ಟೆ ಚೇತರಿಸಿಕೊಳ್ಳುತ್ತಿದ್ದೇವೆ, ಆದರೆ ಇದೇ ಸಂದರ್ಭದಲ್ಲಿ ಮಳೆಯ ಅಬ್ಬರದಿಂದಾಗಿ ವ್ಯಾಪಾರ ಕಳೆದುಕೊಳ್ಳುತ್ತಿದ್ದೇವೆ ಎಂದು ಬೀದಿ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದು, ಮಳೆ ಹಾನಿ ಹಾಗೂ ಪರಿಹಾರ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಂಸಲೇಖ ವಿರುದ್ಧ ದೂರು ನೀಡಿದ ವ್ಯಕ್ತಿಯ ವಿರುದ್ಧವೂ ದೂರು ದಾಖಲು

ಹೌದು ನಾನು ಕಿರುಚುವ ಬೊಬ್ಬೆ ಹೊಡೆಯುವ ‘ಕಲ್ಕಿಂಗ್ ಸ್ಟಾರ್’ | ಟೀಕಾಕಾರರಿಗೆ ದೀಪು ಶೆಟ್ಟಿಗಾರ್ ತಿರುಗೇಟು

ಉಪ್ಪಿಟ್ಟಿನಲ್ಲಿ ಹಾವಿನ ಮರಿ?: 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗೆ ಕೋಲಾರ ಪ್ರವೇಶಕ್ಕೆ ನಿರ್ಬಂಧ!

ಕಾಲುಂಗುರ, ಕಾಲ್ಗೆಜ್ಜೆ ಕಳವು ಮಾಡಲು ಮಹಿಳೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು!

ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ

ಇತ್ತೀಚಿನ ಸುದ್ದಿ