ನಾಗಮಂಗಲ: ಬಂಧನದ ಭೀತಿಯಿಂದ ಮನೆ ಬಿಟ್ಟ ಯುವಕರು! - Mahanayaka
1:03 AM Wednesday 11 - December 2024

ನಾಗಮಂಗಲ: ಬಂಧನದ ಭೀತಿಯಿಂದ ಮನೆ ಬಿಟ್ಟ ಯುವಕರು!

police
16/09/2024

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಡಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಇದರಿಂದಾಗಿ ಬಂಧನದ ಭೀತಿಯಲ್ಲಿರುವ ಯುವಕರು ತಲೆಮರೆಸಿಕೊಳ್ಳಲು ಊರು ಬಿಟ್ಟಿದ್ದಾರೆ ಎಂದು ವರದಿಯಾಗಿದೆ.

ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಅನೇಕ ಅಂಗಡಿಗಳಿಗೂ ಬೆಂಕಿ ಹಚ್ಚಿ ವ್ಯಾಪಕ ಹಾನಿ ಉಂಟು ಮಾಡಿದ್ದರು. ಈಗಾಗಲೇ ಅನೇಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬದ್ರಿಕೊಪ್ಪಲು ಗ್ರಾಮದಲ್ಲಿ ಹಿಂದೂ ಯುವಕರು ಊರು ಬಿಟ್ಟಿದ್ದಾರೆ. ಇನ್ನೊಂದೆಡೆ ಪಟ್ಟಣದ ಮುಸ್ಲಿಂ ಬ್ಲಾಕ್ ನಲ್ಲಿ ಕೂಡ ಯುವಕರು ಊರು ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗಲಭೆಯಲ್ಲಿ ಭಾಗಿಯಾಗಿರುವ ಯುವಕರನ್ನು ವಿಡಿಯೋ , ಸಿಸಿ ಕ್ಯಾಮರಾಗಳ ಆಧಾರದಲ್ಲಿ ಪೊಲೀಸರು ಗುರುತಿಸಿ ಕ್ರಮಕೈಗೊಳ್ಳುತ್ತಿದ್ದಾರೆ. ಒಬ್ಬರನ್ನೂ ಬಿಡದೇ ಜಾಲಾಡುತ್ತಿದ್ದಾರೆ. ಇದೇ ಕಾರಣದಿಂದಾಗಿ ಯುವಕರು ಊರು ಬಿಟ್ಟು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ನಾಗಮಂಗಲ ಇನ್ ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ‌ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಕೊಟ್ಟ ರೂಟ್ ನ್ನು ಬದಲಾವಣೆ ಮಾಡಿದ್ದರು. ಅದು ಅವರದ್ದೇ ಜವಬ್ದಾರಿ, ಇಡೀ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಏನೇ ಆದರೂ ನೀವೇ ಜವಾಬ್ದಾರಿ ಅಂತಾ ಹೇಳಿದ್ವಿ, ನಾಗಮಂಗಲದ ಅಧಿಕಾರಿಯಿಂದ ಸ್ವಲ್ಪ ನಿರ್ಲಕ್ಷ್ಯ ಕಾಣ್ತು ಅಂತಾ ಅವರನ್ನು ಸಸ್ಪೆಂಡ್ ಮಾಡಿದ್ದಾರೆ ಎಂದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ