ನಾಗ್ಪುರ ಹಿಂಸಾಚಾರ ಪ್ರಕರಣ: 54 ಮಂದಿಯ ಬಂಧನ

ನಾಗ್ಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು 54 ಜನರನ್ನು ಬಂಧಿಸಿದ್ದು, ಮಾಸ್ಟರ್ ಮೈಂಡ್ ವ್ಯಕ್ತಿಯನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಗೃಹ ಖಾತೆ ರಾಜ್ಯ ಸಚಿವ ಯೋಗೇಶ್ ಕದಮ್ ತಿಳಿಸಿದ್ದಾರೆ. ಪೊಲೀಸ್ ಸಿಬ್ಬಂದಿಯ ಮೇಲಿನ ದಾಳಿಯನ್ನು ಕಠಿಣ ಕ್ರಮದೊಂದಿಗೆ ಎದುರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನಾಗ್ಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವತ್ತನಾಲ್ಕು ಜನರನ್ನು ಬಂಧಿಸಲಾಗಿದೆ. ಅವರು ಪೊಲೀಸರ ಮೇಲೆ ದಾಳಿ ಮಾಡಲು ಬಂದವರಾಗಿದ್ದಾರೆ. ಪೊಲೀಸ್ ಭಯ ಎಂದರೇನು ಎಂಬುದನ್ನು ನಾವು ತೋರಿಸುತ್ತೇವೆ. ಅವರನ್ನು ಬಿಡುವುದಿಲ್ಲ” ಎಂದು ಕದಮ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪೊಲೀಸರ ನೈತಿಕ ಸ್ಥೈರ್ಯಕ್ಕೆ ಧಕ್ಕೆಯಾಗುವುದಿಲ್ಲ ಎಂದು ಸಚಿವರು ಇದೇ ವೇಳೆ ಅವರು ಭರವಸೆ ನೀಡಿದರು ಮತ್ತು ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. “ಹಿಂಸಾಚಾರದ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಹುಡುಕುತ್ತಿದ್ದಾರೆ” ಎಂದು ಅವರು ಹೇಳಿದರು. ಸಾಮಾಜಿಕ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ವೀಡಿಯೊಗಳನ್ನು ಹರಡುವವರಿಗೆ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj