ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ್ ಬೊಮ್ಮಾಯಿ - Mahanayaka
10:05 AM Thursday 12 - December 2024

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ್ ಬೊಮ್ಮಾಯಿ

basava raj bommai
27/07/2021

ಬೆಂಗಳೂರು:  ಇಂದು ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವುದಾಗಿ ಅವರು ಹೇಳಿದ್ದು, ನಾಳೆ ನಾನು ಒಬ್ಬನೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಬೊಮ್ಮಾಯಿ ತಿಳಿಸಿದರು.

 ನನ್ನ ರಾಜಕೀಯ ಬೆಳವಣಿಗೆಗೆ ಕಾರಣೀಭೂತರು, ರಾಜಕೀಯ ಗುರುಗಳಾದ ಯಡಿಯೂರಪ್ಪನವರ ಆಶೀರ್ವಾದದಿಂದ, ಪಕ್ಷದ ಶಾಸಕರು, ನಾಯಕರ ಸಹಕಾರದಿಂದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದೇನೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಡವರು, ದಲಿತರು, ಹಿಂದುಳಿದ ವರ್ಗದವರು ಎಲ್ಲ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ. ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಬಡ ಜನರ ಪರವಾದ, ಎಲ್ಲರಿಗೂ ನ್ಯಾಯಸಮ್ಮತವಾದ ಆಡಳಿತವನ್ನು ಕೊಡಬೇಕೆನ್ನುವ ಸಂಕಲ್ಪವನ್ನು ಮಾಡಿದ್ದೇನೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಕೇಂದ್ರ ಸಚಿವರು, ವೀಕ್ಷಕರು, ಉಸ್ತುವಾರಿಗಳು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಹೃದಯಪೂರ್ವಕವಾಗಿ ಧನ್ಯವಾದಗಳು. ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಹಕಾರಕ್ಕೆ ಧನ್ಯವಾದಗಳು. ಎಲ್ಲರಿಗೂ ಧನ್ಯವಾದಗಳು ಎಂದು ಬೊಮ್ಮಾಯಿ ಹೇಳಿದರು.

ಇತ್ತೀಚಿನ ಸುದ್ದಿ