ನಾಳೆ ಕರ್ನಾಟಕ ಬಂದ್ ಇದೆಯಾ? | ಸಿಎಂ ಜೊತೆಗೆ ಕನ್ನಡ ಪರ ಸಂಘಟನೆ ಸಭೆ
ಬೆಂಗಳೂರು: ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ನ್ನು ವಾಪಸ್ ಪಡೆದುಕೊಳ್ಳಲಾಗಿದ್ದು, ಹೀಗಾಗಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಇರುವುದಿಲ್ಲ.
ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆಗೆ ಕನ್ನಡ ಚಳವಳಿಯ ವಾಟಾಳ್ ನಾಗರಾಜ್ ಅವರು ಸಭೆ ನಡೆಸಿದ್ದು, ಈ ವೇಳೆ ಎಂಇಎಸ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಬಂದ್ ನ್ನು ಮುಂದೂಡಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಎಂಇಎಸ್ ನಿಷೇಧಕ್ಕೆ ಯಾವುದೇ ಗಡುವು ನೀಡಿಲ್ಲ. ಆದರೆ, ಎಂಇಎಸ್ ನ್ನು ನಿಷೇಧ ಮಾಡಲೇ ಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿಕೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಮದುವೆಯಾಗಿ 25 ವರ್ಷದ ಬಳಿಕ ಗಂಡು ಮಗು ಹುಟ್ಟಿದ ಸಂಭ್ರಮ | ಈಶ್ವರಪ್ಪ
ಅಪ್ಪೆ ಸಾಲೊದ ಪನ್ನಿ/ ಬಂಗಾಡಿಗೆ ಪ್ರಯಾಣ | ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 12
ಕಾಂಗ್ರೆಸ್ ಗೆ ಬಹುಮತ: ಸಚಿವ ಶ್ರೀರಾಮುಲುಗೆ ಮುಖ ಭಂಗ
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 6 ಉಗ್ರರ ಹತ್ಯೆ | ಯೋಧ ಹುತಾತ್ಮ, ಮೂವರಿಗೆ ಗಾಯ
ಮತಾಂತರ ಆರೋಪ: ಶಾಲೆಯ ಮಾನ್ಯತೆ ರದ್ದುಪಡಿಸಲು ಬಿಜೆಪಿ, ಆರೆಸ್ಸೆಸ್ ಪ್ರತಿಭಟನೆ