ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ಮಾಧುಸ್ವಾಮಿ ರಾಜೀನಾಮೆ! - Mahanayaka

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ಮಾಧುಸ್ವಾಮಿ ರಾಜೀನಾಮೆ!

25/01/2021

ಬೆಂಗಳೂರು: ಪದೇ ಪದೇ ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡ ಸಚಿವ ಮಾಧುಸ್ವಾಮಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ನಾಳೆ ಮಧ್ಯಾಹ್ನ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿರುವುದಾಗಿ ವರದಿಯಾಗಿದೆ.

ಪದೇ ಪದೇ ಸಚಿವ ಸ್ಥಾನದಲ್ಲಿ ಬದಲಾವಣೆಯಿಂದ ಮಾಧುಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ. ನಾಳೆ ಮಧ್ಯಾಹ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿದ್ದಾರೆ.

ಜನವರಿ 26ರ ಗಣರಾಜ್ಯೋತ್ಸವದ ದಿನವಾದ ನಾಳೆ, ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಾಗಿ ಮಾಧುಸ್ವಾಮಿ ಹೇಳಿದ್ದಾರೆ

ತನ್ನ ರಾಜೀನಾಮೆಯನ್ನು  ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ