ಮದ್ಯಪ್ರಿಯರಿಗೆ ಶಾಕ್: ನಾಳೆಯಿಂದ 3 ದಿನಗಳ ಕಾಲ ಬಾರ್ ಬಂದ್!
ಬೆಂಗಳೂರು: ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 8ರಿಂದ 3ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಡಿಸೆಂಬರ್ 8, 9, 10ರಂದು ಮೂರು ದಿನಗಳ ಕಾಲ ವೈನ್ ಸ್ಟೋರ್ ಹಾಗೂ ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಇನ್ನೂ ಮೂರು ದಿನಗಳ ಕಾಲ ಬಾರ್ ಬಂದ್ ಗೆ ಮದ್ಯ ಪ್ರಿಯರು ಹಾಗೂ ಬಾರ್ ಮಾಲಿಕರಿಂದ ವಿರೋಧ ವ್ಯಕ್ತವಾಗಿದೆ.
25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಪ್ರಮುಖ ಮೂರು ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ
ಮಾವನ ಪಿಎಫ್ ಹಣಕ್ಕಾಗಿ ಪತ್ನಿಯನ್ನು ಕೊಂದೇ ಬಿಟ್ಟ!
ವಿಕೃತ ಘಟನೆ: ಗರ್ಭಿಣಿ ತಂಗಿಯ ಶಿರಚ್ಛೇದಿಸಿ ಸೆಲ್ಫಿ ತೆಗೆದುಕೊಂಡ ಸಹೋದರ!
ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ