ಬ್ರೇಕಿಂಗ್ ನ್ಯೂಸ್:  ಶಾಲಾ ಕಾಲೇಜುಗಳು ಬಂದ್ | ನಾಳೆಯಿಂದ ರಾಜ್ಯಾದ್ಯಂತ ಟಫ್ ರೂಲ್ಸ್ - Mahanayaka
2:15 AM Thursday 12 - December 2024

ಬ್ರೇಕಿಂಗ್ ನ್ಯೂಸ್:  ಶಾಲಾ ಕಾಲೇಜುಗಳು ಬಂದ್ | ನಾಳೆಯಿಂದ ರಾಜ್ಯಾದ್ಯಂತ ಟಫ್ ರೂಲ್ಸ್

lock
20/04/2021

ಬೆಂಗಳೂರು: ಕೊರೊನಾ ಎರಡನೇ ಹಂತದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿ 7 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಆದೇಶಿಸಿದ್ದು,  ಮೇ 4ರವರೆಗೆ ರಾಜ್ಯಾದ್ಯಂತ ಟಫ್ ರೂಲ್ಸ್ ಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ.

ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಕೊರೋನಾ ತಡೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ, ಕಾಲೇಜು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಬಂದ್ ಆಗಲಿವೆ. ಕ್ರೀಡಾ ಸಂಕೀರ್ಣ, ಪಾರ್ಕ್, ಸ್ವಿಮ್ಮಿಂಗ್ ಪೂಲ್ ಸೇರಿ ಎಲ್ಲಾ ಬಂದ್ ಆಗಲಿವೆ.

 

ಇತ್ತೀಚಿನ ಸುದ್ದಿ