ನಳಿನ್ ಕುಮಾರ್ ಕಟೀಲ್ ಗೆ ನೋಟಿಸ್ ಕಳಿಸ್ತೇನೆ: ಎಂ.ಬಿ.ಪಾಟೀಲ್ - Mahanayaka

ನಳಿನ್ ಕುಮಾರ್ ಕಟೀಲ್ ಗೆ ನೋಟಿಸ್ ಕಳಿಸ್ತೇನೆ: ಎಂ.ಬಿ.ಪಾಟೀಲ್

mb patil
26/09/2022

ಮಂಗಳೂರು: ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್  ಮಲಪ್ರಭಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಡಿರುವ ಭ್ರಷ್ಟಾಚಾರದ  ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡಿ, ಸೂಕ್ತ ಕ್ರಮಕ್ಕಾಗಿ  ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.


Provided by

ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಇಲಾಖೆ ಗಳಲ್ಲಿ ಶೇ.40 ಕಮಿಷನ್ ಪಡೆಯಲಾಗಿದೆ ಎಂದು ಗುತ್ತಿಗೆದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ  ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಯಲಿ. ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ  ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ ಅಚ್ಛೇದಿನ ಇತ್ತು ಈಗ ಇಲ್ಲ  ಎನ್ನುವು ದನ್ನು  ದೇಶದ ಜನ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶ ಯುವ ಜನರಿಗೆ ಭ್ರಮ ನಿರಸನವಾಗಿದೆ. ಸಾಕಷ್ಟು ಕಂಪೆನಿಗಳು ಖಾಸಗಿಯವರ ಪಾಲಾಗಿದೆ ಎಂದರು.


Provided by

ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನ ಸಾಮಾನ್ಯರ ನಿತ್ಯ ಬಳಕೆಯ ಪೆಟ್ರೋಲ್, ಅಡುಗೆ ಅನಿಲ, ಖಾದ್ಯ ತೈಲದ ಬೆಲೆ ಗಗನಕ್ಕೇರಿದೆ. ಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಿಸಿಲ್ಲ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ