ಹಿಂದೂ ಸಮಾಜವನ್ನು ಅಶ್ಲೀಲ ಎಂದಿರುವವರು ಹಿಂದೂಗಳ ಮತ ಬೇಡ ಎನ್ನಲಿ: ನಳಿನ್ ಕುಮಾರ್ ಕಟೀಲ್
ಚಿಕ್ಕೋಡಿ: ಹಿಂದೂ ಸಮಾಜವನ್ನು ಅಶ್ಲೀಲ ಎಂದು ಹೇಳಿರುವ ಸತೀಶ್ ಜಾರಕಿಹೊಳಿ ತಾಕತ್ ಇದ್ದರೆ ಹಿಂದೂಗಳ ಮತ ಬೇಡ ಎಂದು ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.
ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಬೆಳಗಾವಿಯ ಯಮಕನಮರಡಿ ಮತ ಕ್ಷೇತ್ರದ ಬಸ್ಸಾಪೂರ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ನಳೀನ್, ಹಿಂದೂ ಸಮಾಜ ಎದ್ದು ನಿಂತಿದೆ. ಯಾವ ಕ್ಷೇತದಲ್ಲೂ ಅವರು ನಿಲ್ಲಲಾಗುವುದಿಲ್ಲ, ಯಮಕನಮರಡಿ ಮತ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನುದ್ದೇಶಿಸಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಶ್ ನೇರಲಿ, ಮಾಜಿ ಸಚಿವ ಶಶಕಾಂತ್ ನಾಯಿಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಮೊದಲಾದವರು ಮಾತನಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw