ಹಲ್ಲೆಗೊಳಗಾದ ಬಜರಂಗದಳದ ಕಾರ್ಯಕರ್ತರನ್ನು ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ನಲ್ಲಿ ನಡೆದ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹೇಂದ್ರ ಎಂಬುವವರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೇ ವೇಳೆ ಮಂಗಳೂರಿನ ಎಜೆ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.
ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರದಿಂದಾಗಿ ಈ ಹಲ್ಲೆ ಪ್ರಕರಣ ನಡೆದಿತ್ತು.
ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಈ ಕೃತ್ಯ ಎಸಗಿತ್ತು. ವಿಟ್ಲ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw