ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹೋದರ ನವೀನ್ ಕುಮಾರ್ ನಿಧನ - Mahanayaka
6:59 AM Saturday 14 - December 2024

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹೋದರ ನವೀನ್ ಕುಮಾರ್ ನಿಧನ

naveen kumar kunjadi
28/06/2021

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ 56 ವರ್ಷ ವಯಸ್ಸಿನ ನವೀನ್ ಕುಮಾರ್ ಕೃಷಿಕರಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ  ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್ ಕುಮಾರ್ ಕಟೀಲ್ , ಸಹೋದರಿ ನಂದಿನಿ ಅವರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ