ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ: ಅಮಿತ್ ಶಾ ವಿಶ್ವಾಸ
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಣಿಪುರದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾರ ಬೆಂಬಲವೂ ಬೇಕಾಗಿಲ್ಲ. ಉತ್ತರ ಪ್ರದೇಶದಲ್ಲಿ ಸುಧಾರಿತ ಕಾನೂನು ಮತ್ತು ಸುವ್ಯವಸ್ಥೆ, ಅಭಿವೃದ್ಧಿ ಯೋಜನೆಗಳ ಅನುಷ್ಠಾನದಿಂದ ನಮಗೆ ಜನಾದೇಶ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
ಪ್ರಧಾನಿ ಮೋದಿಯವರ ಉಸ್ತುವಾರಿಯಲ್ಲಿ ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸಗಳು ಬಿಜೆಪಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದ ಅವರು, ಅಸ್ಸಾಂ ನಂತರ ಮಣಿಪುರದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸಲಿದೆ. ಇದರ ಜೊತೆಗೆ ಗೋವಾ, ಉತ್ತರಾಖಂಡದಲ್ಲಿಯೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೆಟ್ರೋ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಡ್ರಗ್ಸ್ ದಂಧೆ: ವಿದೇಶಿ ಪ್ರಜೆಗಳು ಸೇರಿ ನಾಲ್ವರು ಆರೋಪಿಗಳ ಬಂಧನ
ಕಲುಷಿತ ನೀರು ಸೇವನೆ: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ‘
ಕಾರ್ಯಾಚರಣೆ ವೇಳೆ ನಾಲ್ಕನೇ ಅಂತಸ್ತಿನಿಂದ ಬಿದ್ದ ಅಗ್ನಿಶಾಮಕ ಸಿಬ್ಬಂದಿ
ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು