125 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ! - Mahanayaka
6:26 PM Thursday 12 - December 2024

125 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ!

congress
18/03/2023

ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ 71 ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ನಂತರ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರ ಜತೆ ಕಳೆದ ಬಾರಿ ಕಡಿಮೆ ಅಂತದಲ್ಲಿ ಸೋತವರಿಗೂ ಟಿಕೆಟ್​ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಹರಿಹರ (ಆರ್‌.ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ) ಹಾಗೂ ಲಿಂಗಸುಗೂರು (ಡಿ.ಎಸ್‌.ಹೂಲಗೇರಿ) ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸಿದರೆ ಗೆಲುವು ಕಷ್ಟ ಎಂದು ಪಕ್ಷದ ಆಂತರಿಕ ಸಮೀಕ್ಷೆಗಳು ತಿಳಿಸಿವೆ. ಹಾಗಾಗಿ ಈ  ಕ್ಷೇತ್ರಗಳಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲು  ಹೈಕಮಾಂಡ್ ನಿರ್ಧರಿಸಿದೆ.

ಪಾವಗಡ (ವೆಂಕಟರಮಣಯ್ಯ),  ಅಫಜಲಪುರ (ಎಂ.ವೈ.ಪಾಟೀಲ) ಕ್ಷೇತ್ರದ ಶಾಸಕರು ತಮ್ಮ ಪುತ್ರರಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಒಪ್ಪಿದೆ. ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ) ಕ್ಷೇತ್ರದ ಕುರಿತು ಹಿರಿಯ ನಾಯಕರು ಇನ್ನಷ್ಟು ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುವುದು ಉತ್ತಮ ಎಂಬ ನಿರ್ಧಾರಕ್ಕೆ ಬರಲಾಯಿತು.ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಹಿರಿಯ ಮುಖಂಡರೊಬ್ಬರು, ”ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇದೇ 20ರಂದು ಬೆಳಗಾವಿಯಲ್ಲಿ ನಡೆಯುವ ‘ಯುವ ಕ್ರಾಂತಿ ರ‍್ಯಾಲಿ’ಗೆ ಬರಲಿದ್ದಾರೆ. ಆ ಬಳಿಕವೇ  ಮೊದಲ ಪಟ್ಟಿ ಪ್ರಕಟಿಸಬೇಕು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕವಾಗಿ ಒಪ್ಪಿದೆ ಎಂದು ಹೇಳಿದರು.

ಈ ಬಾರಿ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರು ಸೂಚಿಸುವ ಮುಖಂಡರಿಗೆ ಟಿಕೆಟ್‌ ನೀಡಲು ತೀರ್ಮಾನಿಸಲಾಯಿತು. ಜತೆಗೆ, ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ, ಎರಡು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮುಳಬಾಗಿಲಿನ ಶಾಸಕ ಎಚ್‌.ನಾಗೇಶ್‌ ಅವರನ್ನು ಮಹದೇವಪುರದಲ್ಲಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರನ್ನು ಬಸವನಗುಡಿ ಕ್ಷೇತ್ರದಲ್ಲಿ ಟಿಕೆಟ್ ನೀಡಲು ನಿರ್ಧರಿಸದಲಾಯಿತು.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಲು ಕೆಲವು ನಾಯಕರಿಂದ ಒಲವು ವ್ಯಕ್ತಪಡಿಸಿದರು. ಆದರೆ ಅವರು ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದ ಬಳಿಕ ಅಂತಿಮಗೊಳಿಸುವುದು ಉತ್ತಮ ಎಂದು ಹಲವು ಮುಖಂಡರು ಸಲಹೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ