ನಮ್ಮ ಹುಡುಗರಿಗೆ ಮೆಚ್ಯುರಿಟಿ ಕಡಿಮೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ - Mahanayaka

ನಮ್ಮ ಹುಡುಗರಿಗೆ ಮೆಚ್ಯುರಿಟಿ ಕಡಿಮೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

eshwarappa
29/07/2022

ADS


Provided by

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಕಾರ್ಯಕರ್ತರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕೆ.ಎಸ್.ಈಶ್ವರಪ್ಪ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎಂದು ಹೇಳಿದ್ದಾರೆ.


Provided by

ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ ಏಕೆ ಸಾಯಲು ಹೋದರು. ನಾನು ರಾಜೀನಾಮೆ ನೀಡಿ ಹೋಗುತ್ತೇನೆ ಎಂದು ಹೇಳಿದ್ದರಾ ಅವರು?  ಪಂಡಿತ್ ದೀನದಯಾಳು ಉಪಾದ್ಯಾಯ ಅವರನ್ನು ರೈಲಿನಲ್ಲಿ ಕೊಂದು ಹಾಕಿದರು. ದೀನ ದಯಾಳು ಅವರು ನನಗೆ ಪಕ್ಷ ಬೇಡ ಎಂದು ಹೋರಹೋಗಿದ್ದರಾ..? ಆದರೆ ನಮ್ಮ ಹುಡುಗರಿಗೆ ಮೆಚ್ಯುರಿಟಿ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ನಾವು ಅವರನ್ನು ಸಮಾಧಾನ ಮಾಡುತ್ತೇವೆ ಎಂದರು.

ಹಿರಿಯರಾಗಿ ಅವರು ಬೈದರು ಎಂದು ನಾವು ಅವರಿಗೆ ವಾಪಸ್ ಬೈಯುವುದೇ..? ಅವರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಸ್ವೀಕರಿಸಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂದಿದ್ದಾರೆ.

ADS

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ