ನಮ್ಮ ರಾಜ್ಯ ವಿದೇಶಿಗರ ಪಾಲಿಗೆ ಧರ್ಮಛತ್ರ ಆಗಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ - Mahanayaka
5:46 AM Friday 20 - September 2024

ನಮ್ಮ ರಾಜ್ಯ ವಿದೇಶಿಗರ ಪಾಲಿಗೆ ಧರ್ಮಛತ್ರ ಆಗಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ

araga janedra
07/03/2022

ಬೆಂಗಳೂರು: ಕರ್ನಾಟಕದಲ್ಲಿಯೇ ಉಳಿದಿರುವ ವಿದೇಶಿಗರು ನಡೆಸುತ್ತಿರುವ ಡ್ರಗ್ಸ್​ ದಂಧೆಯ ಬಗ್ಗೆ ವಿಧಾನ ಪರಿಷತ್​ನಲ್ಲಿ ಸೋಮವಾರ ಚರ್ಚೆ ನಡೆಯಿತು. ವಿದೇಶಿಗರು ಮತ್ತು ಡ್ರಗ್ಸ್​ ದಂಧೆಕೋರರ ಪಾಲಿಗೆ ನಮ್ಮ ದೇಶ ಧರ್ಮಛತ್ರ ಆಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ವಿಧಾನ ಪರಿಷತ್​ನಲ್ಲಿ ಚರ್ಚೆ ವೇಳೆ ಮಾತನಾಡಿದ ಅವರು, ಡ್ರಗ್ಸ್​ ದಂಧೆಯನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳುತ್ತಿದೆ. ಪ್ರತಿ ಪೊಲೀಸ್ ಸ್ಟೇಷನ್​ನಲ್ಲಿಯೂ ರಿಜಿಸ್ಟರ್ ನಿರ್ವಹಿಸಲು ಸೂಚಿಸಿದ್ದೇನೆ. ದೇಶದ ಏಕತೆ ಮತ್ತು ಭದ್ರತೆಯ ವಿಚಾರದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ. ನೈಜಿರಿಯಾ ಪ್ರಜೆಗಳು ಡ್ರಗ್ಸ್​ ದಂಧೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಸಿಸಿಬಿ ಅಧಿಕಾರಿಗಳು ದಿನಕ್ಕೆ ಎರಡು ಮೂರು ದಾಳಿಗಳನ್ನು ನಡೆಸುತ್ತಿದ್ದರೂ ಪ್ರಯೋಜನವಾಗುತ್ತಿಲ್ಲ. ಬದಲಾಗಿ, ಡಿಟೆನ್ಷನ್ ಸೆಂಟರ್​ಗಳೇ ಸಣ್ಣದಾಗುತ್ತಿವೆ ಎಂದರು.

ನೈಜಿರಿಯಾ ಹೆಣ್ಣು ಮಕ್ಕಳನ್ನು ನಿಯಂತ್ರಿಸುವುದು ನಮ್ಮ ಪೊಲೀಸರಿಗೂ ಕಷ್ಟವಾಗುತ್ತಿದೆ. ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಈವರೆಗೆ 8,000ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಡ್ರಗ್ಸ್​ ನಿಯಂತ್ರಣಕ್ಕೆ ಬರದಿದ್ದರೆ ಪೊಲೀಸರನ್ನೇ ಹೊಣೆಯಾಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.


Provided by

ಚರ್ಚೆ ಆರಂಭಿಸಿದ್ದ ಸದಸ್ಯ ಸಲೀಂ ಅಹ್ಮದ್, ಬಹುತೇಕ ಅಕ್ರಮ ವಿದೇಶಿಗರು ಡ್ರಗ್ಸ್ ಪೆಡ್ಲರ್‌ಗಳಾಗಿದ್ದಾರೆ, ವೀಸಾ ಅವಧಿ ಮುಗಿದವರನ್ನು ತಕ್ಷಣ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಇದು ಬೆಂಗಳೂರಿಗೆ ಮಾತ್ರ ಸೀಮಿತ ಆಗಿಲ್ಲ, ಹುಬ್ಬಳ್ಳಿ ಶಿವಮೊಗ್ಗಕ್ಕೂ ಹರಡಿದೆ ಎಂದು ಹೇಳಿದರು.

ಶೂನ್ಯ ವೇಳೆಯಲ್ಲಿ ಕಾಸರಗೋಡು ಶಾಲೆಗೆ ಮಲಯಾಳಂ ಶಿಕ್ಷಕರ ನೇಮಕ ವಿಚಾರ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್, ಕನ್ನಡ ಶಿಕ್ಷಕರ ನೇಮಕ ಮಾಡುವಂತೆ ಕೇರಳ ಹೈಕೋರ್ಟ್ ಆದೇಶವಿದ್ದರೂ ಅಲ್ಲಿ ಮಲಯಾಳಂ ಶಿಕ್ಷಕರನ್ನು ನೇಮಿಸಲಾಗಿದೆ. ಅಲ್ಲಿ ಶೀಘ್ರ ಕನ್ನಡ ಶಿಕ್ಷಕರ ನೇಮಕಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಗಡಿಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೇರಳ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸರ್ಕಾರಕ್ಕೆ ಸಲೀಂ ಅಹ್ಮದ್ ಒತ್ತಾಯಿಸಿದರು.

ಚರ್ಚೆ ವೇಳೆ ಸರ್ಕಾರದ ಪರವಾಗಿ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ಕುಮಾರ್, ಈ ಕುರಿತು ಕೇರಳ ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಅಲ್ಲಿನ ಮಕ್ಕಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮಾತನಾಡಿ, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನಿಂದ ಕೊಲೆಯಾದ ದಿನೇಶ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶೂನ್ಯವೇಳೆಯಲ್ಲಿ ಆಗ್ರಹಿಸಿದರು. ಅಲ್ಲದೆ, ಹರ್ಷ ಕೊಲೆಯಾದಾಗ 25 ಲಕ್ಷ ರೂ. ವನ್ನು ಸರ್ಕಾರವೇ ಕೊಟ್ಟಿದೆ. ಆದರೆ ದಿನೇಶ್​ನನ್ನು ಬಿಜೆಪಿ ಕಾರ್ಯಕರ್ತ ಕೊಂದರೂ ಪರಿಹಾರ ಕೊಟ್ಟಿಲ್ಲ ಎಂದು ದೂರಿದರು.

ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಯಾರೇ ತಪ್ಪು ಮಾಡಿದರೂ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಕ್ರಮ ತೆಗೆದುಕೊಳ್ಳುತ್ತೇವೆ. ಇಲಾಖೆಯಿಂದ ಕೊಡಬಹುದಾದ ಪರಿಹಾರವನ್ನು ಕೊಡುತ್ತೇವೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಪ್ರೀತಿಸಿ ಮದುವೆಯಾದ ಯುವತಿಯನ್ನು ಎಳೆದೊಯ್ದ ಪೊಲೀಸರು

ಯುದ್ಧ ಪೀಡಿತ ಉಕ್ರೇನ್‌ ನಿಂದ 1,000ಕಿ.ಮೀ. ದೂರ ಒಬ್ಬನೇ ಪ್ರಯಾಣಿಸಿದ ಬಾಲಕ

ನೊಟೀಸ್ ನೀಡದೆ ಕೃಷಿ ಭೂಮಿ ತೆರವು: ಅರಣ್ಯಾಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಅತ್ಯಾಚಾರ ಆರೋಪ: ಕೇರಳದ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಎಂಜಿನ್ ಕೆಟ್ಟಿರುವ ಡಬ್ಬಾ ಸರ್ಕಾರ: ಸಿದ್ದರಾಮಯ್ಯ

 

ಇತ್ತೀಚಿನ ಸುದ್ದಿ