ನಂದಿಬೆಟ್ಟದಿಂದ ಬೆಟ್ಟದಿಂದ ಜಾರಿ ಬಿದ್ದ ಯುವಕ: ಅಗ್ನಿ ಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದಿರುವ ಘಟನೆ ನಡೆದಿದೆ.
ನಂದಿಬೆಟ್ಟದ ತಪ್ಪಲಿನಲ್ಲಿದುರ್ಗಮ ಪ್ರದೇಶದಲ್ಲಿ ಸಿಲುಕಿರೋ ನಿಶಾಂತ್ ಗುಲ್ಲಾ (19) ಎಂಬ ಯುವಕ, ನಾಲ್ವರು ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದ. ಆ ವೇಳೆ ನಿಶಾಂತ್ ಕಾಲು ಜಾರಿ ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದಾನೆ.
ಇದೀಗ ಮೇಲೆ ಬರಲು ಆಗದೇ ಯುವಕ ಅಸ್ವಸ್ಥಗೊಂಡಿದ್ದು, ಪ್ರಾಣ ರಕ್ಷಣೆಗೆ ಮೊರೆ ಹಿಡಿಯುತ್ತಿದ್ದಾನೆ. ತಕ್ಷಣ ನಿಶಾಂತ್ ಸ್ನೇಹಿತರು ನಂದಿಗಿರಿಧಾಮ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಮೇರೆಗೆ ಪೊಲೀಸರು ಹಾಗೂ ಅಗ್ನಿಶಾಮ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಯುವಕನ ರಕ್ಷಣೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರ ಆರೋಪಿಗಳ ಬಂಧನ, 28 ಮಹಿಳೆಯರ ರಕ್ಷಣೆ
ಸಾಲದ ಹೊರೆ: ವಿಷ ಸೇವಿಸಿ ರೈತ ಆತ್ಮಹತ್ಯೆ
ಆಕ್ಸ ಲ್ ತುಂಡಾಗಿ ಹೆದ್ದಾರಿಯಲ್ಲೇ ಕಾರು ಪಲ್ಟಿ: ಮೂವರು ಗಂಭೀರ
ಹಳೆ ದ್ವೇಷದ ಹಿನ್ನೆಲೆ: ಚಿಕ್ಕಮ್ಮನ ಕೊಲೆ ಯತ್ನ | ಆರೋಪಿಗಳ ಬಂಧನ