ನಂದಿನಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ - Mahanayaka

ನಂದಿನಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

suiced
16/02/2022

ಹಳೆಯಂಗಡಿ: ಹಳೆಯಂಗಡಿ ಬಳಿಯ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಇಂಜಿನಿಯರೋರ್ವರು ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಶಿವಮೊಗ್ಗ ಮೂಲದ ಸುಚೇಂದ್ರ ಕುಮಾರ್(39) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್‌ನನ್ನು ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಇಂಜಿನಿಯರ್ ಆಗಿ ವೃತ್ತಿ ಮಾಡಿಕೊಂಡಿದ್ದ ಸುಚೇಂದ್ರರ ಅವರ ಪತ್ನಿಯ ಮನೆ ಚೇಳ್ಯಾರಿನಲ್ಲಿದ್ದು, ಬುಧವಾರ ಬೆಳಗ್ಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು.

12 ಗಂಟೆಯ ಸುಮಾರಿಗೆ ಸೇತುವೆಯಿಂದ ಹಾರಿದ ಮಾಹಿತಿ ಬಂದಿದ್ದು, ಸ್ಥಳಕ್ಕೆ ಧಾವಿಸಿದ ಮೂಲ್ಕಿ ಠಾಣಾ ಪೊಲೀಸರು ಸ್ಥಳೀಯರ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಇವರು ವರ್ಕ್ ಫ್ರಂ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ; ಸಿದ್ದರಾಮಯ್ಯ

ಬಾವಿಗೆ ಬಿದ್ದು ಬಾಲಕಿ ಸಾವು: ತಾಯಿ ವಿರುದ್ಧ ತಂದೆಯಿಂದಲೇ ಕೊಲೆ ಆರೋಪ

ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ವಿಡಿಯೋ ಮಾಡಿದ ಪತ್ರಕರ್ತ!

ಇತ್ತೀಚಿನ ಸುದ್ದಿ