ನಂದಿನಿ ತಂಟೆಗೆ ಬಂದ್ರೆ, ಬಿಜೆಪಿ ಭಸ್ಮ: ಕುಮಾರಸ್ವಾಮಿ ಎಚ್ಚರಿಕೆ
ಬೆಂಗಳೂರು: ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಅಮೂಲ್ ಹಾಗೂ ನಂದಿನಿ ವಿಲೀನದ ಬಗ್ಗೆ ಅಮಿತ್ ಶಾ ಹೇಳಿಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ ಕೈಗಾರಿಕಾ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು ಎಂದು ಕುಮಾರಸ್ವಾಮಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ನೆಲ, ಜಲ ನುಡಿಯ ಬಗ್ಗೆ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಕರ್ನಾಟಕದ ಹಾಲಿನಲ್ಲೂ ಗುಜರಾತ್ ನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka