ನನ್ನ ಕಾರು ಅಪಘಾತವಾಗಿಲ್ಲ, ನಾನು ಸುರಕ್ಷಿತವಾಗಿದ್ದೇನೆ | ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ - Mahanayaka
1:00 AM Wednesday 11 - December 2024

ನನ್ನ ಕಾರು ಅಪಘಾತವಾಗಿಲ್ಲ, ನಾನು ಸುರಕ್ಷಿತವಾಗಿದ್ದೇನೆ | ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

prathap simha car
22/11/2021

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಕಾರು ಅಪಘಾತವಾಗಿದೆ ಎಂಬ ವದಂತಿಯೊಂದು ಹರಡಿದ್ದು, ಈ ಸಂಬಂಧ ಸ್ವತಃ ಪ್ರತಾಪ್ ಸಿಂಹ ಅವರೇ ಸ್ಪಷ್ಟನೆ ನೀಡಿದ್ದು, ನನ್ನ ಕಾರು ಅಪಘಾತವಾಗಿಲ್ಲ. ಬೆಂಗಳೂರಿನ ವ್ಯಕ್ತಿಯೊಬ್ಬರ ಕಾರು ಅಪಘಾತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಾಪ್ ಸಿಂಹ ಅವರ ಕಾರು ಅಪಘಾತವಾಗಿದೆ. ಜೊತೆಗೆ ಅವರ ಕುಟುಂಬ ಕೂಡ ಇತ್ತು ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ವಿಡಿಯೋ ಮೂಲಕ ಸ್ಪಷ್ಟಣೆ ನೀಡಿರುವ ಸಂಸದರು, ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಉನ್ನಿಕೃಷ್ಣ ಎಂಬವರ ಕಾರು ಪಲ್ಟಿಯಾಗಿದೆ. ಅಪಘಾತ ನಡೆದಾಗ ನಾನು ಸಮೀಪದ ಹೊಟೇಲ್ ನಲ್ಲಿದ್ದೆ. ಅಪಘಾತದ ಶಬ್ಧ ಕೇಳಿ ಅಲ್ಲಿಗೆ ಓಡಿ ಹೋಗಿದ್ದೆವು ಎಂದು ತಿಳಿಸಿದ್ದಾರೆ.

ಅಪಘಾತವಾದಾಗ ನಾವು ಚನ್ನಪಟ್ಟಣದ ಹೊಟೇಲ್ ನಲ್ಲಿ ಊಟ ಮಾಡುತ್ತಿದ್ದೆವು.  ಬೆಂಗಳೂರು-ಮೈಸೂರು ಹೆದ್ದಾರಿ ಇದಾಗಿದ್ದು, ಯಾರು ಕೂಡ ಆ ಸಮಯದಲ್ಲಿ ವಾಹನ ನಿಲ್ಲಿಸಲಿಲ್ಲ. ಊಟ ಮಾಡುತ್ತಿದ್ದ ನಾವು ಸ್ಥಳಕ್ಕೆ ಓಡಿ ಹೋದೆವು. ದೊಡ್ಡ ಮಟ್ಟದ ಅಪಘಾತವಾಗಿರಲಿಲ್ಲ. ಹಾಗಾಗಿ ಕುಟುಂಬವನ್ನು ತಕ್ಷಣವೇ ಬಾಡಿಗೆ ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿದೆವು ಎಂದು ಅವರು ಹೇಳಿದರು. ಜೊತೆಗೆ ಈ ರೀತಿಯ ಅಪಘಾತವಾದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಅವರು ಇದೇ ವೇಳೆ ಹೇಳಿದರು.

ಜನ ಕನ್ಫ್ಯೂಸ್ ಮಾಡಿಕೊಂಡು ನನಗೆ ಕಾಲ್ ಮಾಡ್ತಿದ್ದಾರೆ. ನನ್ನ ಕಾರು ಅಪಘಾತವಾಗಿಲ್ಲ, ನಾನು ಸುರಕ್ಷಿತವಾಗಿದ್ದೇನೆ ಎಂದು ಪ್ರತಾಪ್ ಸಿಂಹ ಅವರು ಸ್ಪಷ್ಟನೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತ್ನಿಯನ್ನು ನಾಲೆಯಲ್ಲಿ ಮುಳುಗಿಸಿ ಕೊಂದು ಹೈಡ್ರಾಮಾ ಆಡಿದ ಪತಿ | ಪೊಲೀಸರಿಗೆ ಈತ ಸಿಕ್ಕಿ ಬಿದ್ದದ್ದು ಹೇಗೆ?

ಬಿಜೆಪಿಗೆ ಮಳೆ ನಿಲ್ಲಿಸೋಕೆ ಬರುತ್ತಾ? | ಸಚಿವ ಈಶ್ವರಪ್ಪ ಬೇಜವಾಬ್ದಾರಿಯ ಹೇಳಿಕೆ!

ಪ್ರಾರ್ಥನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಚರ್ಚ್ ಧರ್ಮಗುರು ನಿಧನ

ಪುನೀತ್ ರಾಜ್ ಕುಮಾರ್ ಅವರ ಬ್ಯಾನರ್ ಹರಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ!

ಶವಾಗಾರದ ಫ್ರೀಜರ್ ನಿಂದ ಹೊರ ತೆಗೆದಾಗ ಸತ್ತ ವ್ಯಕ್ತಿ ಜೀವಂತ!

ಮೋದಿಜಿ ಬಾಲಿವುಡ್ ನಲ್ಲಿರುತ್ತಿದ್ದರೆ, ಎಲ್ಲ ಪ್ರಶಸ್ತಿ ಅವರೇ ಗೆಲ್ಲುತ್ತಿದ್ದರು | ಅಸಾದುದ್ದೀನ್ ಓವೈಸಿ ವ್ಯಂಗ್ಯ

ತಾಕತ್ ಇದ್ದರೆ ಪ್ರತಾಪ್ ಸಿಂಹಗೆ ಚಡ್ಡಿ ಬಿಚ್ಚಿಸಿ ಹೊಡೆಯಿರಿ: ಸುಲಫಲ ಮಠದ ಸ್ವಾಮೀಜಿಗೆ ಸಿದ್ದಲಿಂಗ ಸ್ವಾಮೀಜಿ ತಿರುಗೇಟು

ಇತ್ತೀಚಿನ ಸುದ್ದಿ