ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ | ಸಿದ್ದರಾಮಯ್ಯ ಹೇಳಿಕೆ
ಮೈಸೂರು: ರಾಮಮಂದಿರ ವಿಚಾರದಲ್ಲಿ ಹಲವು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇದೀಗ ಮತ್ತೊಂದು ಅಚ್ಚರಿಯ ಹೇಳಿಕೆ ನೀಡಿದ್ದು, ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶ್ರೀರಾಮ ಜನರ ಧಾರ್ಮಿಕ ನಂಬಿಕೆ. ದೇವರು ಅನ್ನುವುದು ಜನರ ಭಯ, ಭಕ್ತಿಯ ಸಂಕೇತ. ಆದರೆ ಇದನ್ನೇ ಕೆಲವರು ರಾಜಕೀಯಕ್ಕೆ ಬಳಸುತ್ತಾರೆ ಎಂದು ಟೀಕಿಸಿದರು.
ಇನ್ನೂ ತನ್ನ ಊರಲ್ಲಿ ಕಟ್ಟಲಾಗುತ್ತಿರುವ ರಾಮಮಂದಿರದ ವೆಚ್ಚ ಎಷ್ಟು ಎಂದು ಹೇಳಲು ಸಾಧ್ಯವಿಲ್ಲ. ಜನರು ಕೂಡ ಈ ರಾಮಮಂದಿರ ನಿರ್ಮಾಣಕ್ಕೆ ಹಣ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗೆ ಮಾಧ್ಯಮಗಳಲ್ಲಿ ನನ್ನು ಬಹಳಷ್ಟು ಟೀಕಿಸುತ್ತಿದ್ದಾರೆ. ಟೀಕೆಗಳನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇರಬೇಕು. ಸರ್ವಾಧಿಕಾರಿತನ ಇರಬಾರದು. ನಾನು ಟಿವಿಗಿಂತಲೂ ಹೆಚ್ಚಾಗಿ ಪತ್ರಿಕೆಗಳನ್ನು ಹೆಚ್ಚಾಗಿ ಓದುತ್ತಿದ್ದೇನೆ. ಇತ್ತೀಚೆಗೆ ಮಾಧ್ಯಮದವರಿಗೆ ನನ್ನನ್ನು ಟೀಕಿಸದಿದ್ದರೆ, ನಿದ್ದೆಯೇ ಬರುವುದಿಲ್ಲ ಎಂದು ಅವರು ಹೇಳಿದರು.