ನನ್ನ ಸಾವಿಗೆ ಬಿಜೆಪಿಯ ಮಾಜಿ ಶಾಸಕ ಕಾರಣ ಎಂದು ಡೆತ್ ನೋಟ್ ಬರೆದು ಶಿಕ್ಷಕ ಆತ್ಮಹತ್ಯೆ! - Mahanayaka
10:12 AM Thursday 12 - December 2024

ನನ್ನ ಸಾವಿಗೆ ಬಿಜೆಪಿಯ ಮಾಜಿ ಶಾಸಕ ಕಾರಣ ಎಂದು ಡೆತ್ ನೋಟ್ ಬರೆದು ಶಿಕ್ಷಕ ಆತ್ಮಹತ್ಯೆ!

teacher
24/06/2021

ನವದೆಹಲಿ: ತನ್ನ ಸಾವಿಗೆ ಬಿಜೆಪಿ ಮಾಜಿ ಶಾಸಕ ಹಾಗೂ ಆತನ ಪತ್ನಿಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ಬಿಜೆಪಿಯ ಮಾಜಿ ಶಾಸಕ ಹಾಗೂ ಅವರ ಪತ್ನಿ ನಡೆಸುತ್ತಿದ್ದಾರೆ ಎನ್ನಲಾಗಿರುವ ಇಲ್ಲಿನ ರೋಹಿಣಿ ಪ್ರದೇಶದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ  ಶಿಕ್ಷಕ ತನೂಪ್ ಜೋಹರ್ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ.

ಸಾವಿಗೂ ಮೊದಲು ಡೆತ್ ನೋಟ್ ಬರೆದಿಟ್ಟಿರುವ ಶಿಕ್ಷಕ, ತನಗೆ ಎರಡು ವರ್ಷಗಳಿಂದ ಸಂಬಳವನ್ನೇ ನೀಡಿಲ್ಲ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಯ ಜೊತೆಗೆ ಮಾತನಾಡಿದರೆ, ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಮ್ಮ ಶಾಲೆ ಬಿಜೆಪಿಯ ಮಾಜಿ ಶಾಸಕ ಹಾಗೂ ಅವರ ಪತ್ನಿಗೆ ಸೇರಿದ್ದಾಗಿದೆ. ಹಾಗಾಗಿ ನನ್ನ ಸಾವಿಗೆ ಇವರೇ ಕಾರಣ ಎಂದು ಶಿಕ್ಷಕ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ಶಿಕ್ಷಣ ಸಂಸ್ಥೆಯಿಂದ ಸಂಬಳ ಬಂದಿಲ್ಲವೆಂದು ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಆದರೆ ಎಚ್ಚೆತ್ತುಕೊಳ್ಳದ ಆಡಳಿತ, ಅವರಿಂದ ಆನ್​ಲೈನ್​ ತರಗತಿಗಳನ್ನು ಮಾಡಿಸುತ್ತಿತ್ತೇ ಹೊರತು ಸಂಬಳ ಕೊಟ್ಟಿರಲಿಲ್ಲ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.

ಇತ್ತೀಚಿನ ಸುದ್ದಿ